Karnataka District Court Recruitment 2022 – Apply Online for 24 Stenographer Posts

Karnataka District Court Recruitment 2022 : ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka District Court Recruitment 2022 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆಹುದ್ದೆಗಳ ಸಂಖ್ಯೆ
ಬೆಂಗಳೂರು ಗ್ರಾಮಾಂತರ 20
ಶಿವಮೊಗ್ಗ4

ಶೈಕ್ಷಣಿಕ ಅರ್ಹತೆ : ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
(ಬೆಂಗಳೂರು ಗ್ರಾಮಾಂತರ) ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 28, 2022
(ಶಿವಮೊಗ್ಗ) ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 04, 2022
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 27, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 28, 2022

Karnataka District Court Recruitment 2022 : Important Links

Notification (Bangaluru Rural)Click Here
Notification (Shivamogga)Click Here
Apply Online (Bangaluru Rural)Click Here
Apply Online (Shivamogga)Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment