ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026 – Karnataka Forest Department KFD Recruitment 2026

Karnataka Forest Department KFD Recruitment 2026

Karnataka Forest Department KFD Recruitment 2026 : ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.

Karnataka Forest Department KFD Recruitment 2026 : Details of Vacancies

ಹುದ್ದೆ :

ಅರಣ್ಯ ವೀಕ್ಷಕ (Forest Watcher)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 750 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ 2026

ವಯೋಮಾನ :

ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು ಹಾಗೂ ಸರ್ಕಾರದ ಆದೇಶದನ್ವಯ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿರುತ್ತದೆ.
• ಕನಿಷ್ಠ 18 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 32 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,600 ರಿಂದ ರೂ. 52,800 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಎಸ್.ಎಸ್.ಎಲ್.ಸಿ ಅಥವಾ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಶಾರೀರಿಕ ಮಾನದಂಡಗಳ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. (ಲಿಖಿತ ಪರೀಕ್ಷೆ ಇರುವುದಿಲ್ಲ)

ಶಾರೀರಿಕ ಮಾನದಂಡಗಳ ಪರೀಕ್ಷೆ (PST) (ಪುರುಷ ಅಭ್ಯರ್ಥಿಗಳು) –

ದೇಹದಾರ್ಢತೆಇತರೆ ಪ್ರವರ್ಗಗಳ ಎಲ್ಲಾ ಅಭ್ಯರ್ಥಿಗಳು ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು
ಎತ್ತರಕನಿಷ್ಠ 163 ಸೆ.ಮೀ.ಕನಿಷ್ಠ 152 ಸೆ.ಮೀ
ಎದೆ ಸುತ್ತಳತೆಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 79 ಸೆ.ಮೀ.ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 74 ಸೆ.ಮೀ.
ಎದೆ ಕನಿಷ್ಠ ಹಿಗ್ಗುವಿಕೆ5 ಸೆ.ಮೀ.5 ಸೆ.ಮೀ.

ಶಾರೀರಿಕ ಮಾನದಂಡಗಳ ಪರೀಕ್ಷೆ (PST) (ಮಹಿಳಾ ಅಭ್ಯರ್ಥಿಗಳು) –

ದೇಹದಾರ್ಢತೆಇತರೆ ಪ್ರವರ್ಗಗಳ ಎಲ್ಲಾ ಅಭ್ಯರ್ಥಿಗಳು ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು
ಎತ್ತರಕನಿಷ್ಠ 150 ಸೆ.ಮೀ.ಕನಿಷ್ಠ 145 ಸೆ.ಮೀ
ಕನಿಷ್ಠ ತೂಕ 40 ಕೆ.ಜಿ.38 ಕೆ.ಜಿ.

ದೈಹಿಕ ತಾಳ್ವಿಕೆ ಪರೀಕ್ಷೆ (PET) –

ಪುರುಷ ಅಭ್ಯರ್ಥಿಗಳು1600 ಮೀಟರ್ ಓಟ07 ನಿಮಿಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕು
ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 1000 ಮೀಟರ್ ಓಟ06 ನಿಮಿಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕು

ದೈಹಿಕ ಸಮರ್ಥತೆ ಪರೀಕ್ಷೆ –

ಕ್ರೀಡಾ ಚಟುವಟಿಕೆಪುರುಷ ಅಭ್ಯರ್ಥಿಗಳು ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು
100 ಮೀಟರ್ ಓಟ 15 ಸೆಕೆಂಡುಗಳು18.5 ಸೆಕೆಂಡುಗಳು
ಎತ್ತರ ಜಿಗಿತ (High Jump)1.20 ಮೀಟರ್ 0.90 ಮೀಟರ್
ಉದ್ದ ಜಿಗಿತ (Long Jump)3.80 ಮೀಟರ್ 2.50 ಮೀಟರ್
ಶಾಟ್ ಪುಟ್ (Shotput)
ಪುರುಷ: 16 ಎಲ್.ಬಿ
ಮಹಿಳೆ: 8 ಎಲ್.ಬಿ
5.60 ಮೀಟರ್ 3.76 ಮೀಟರ್
800 ಮೀಟರ್ ಓಟ 2 ನಿಮಿಷ 50 ಸೆಕೆಂಡುಗಳು
200 ಮೀಟರ್ ಓಟ 40 ಸೆಕೆಂಡುಗಳು

ಉದ್ಯೋಗ ಮಾಹಿತಿ : ರೈಲ್ವೆಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ –

• ಪುರುಷ ಅಭ್ಯರ್ಥಿಗಳಿಗೆ – ರೂ. 200
• ಮಹಿಳಾ ಅಭ್ಯರ್ಥಿಗಳಿಗೆ/ ತೃತೀಯ ಲಿಂಗ ಅಭ್ಯರ್ಥಿಗಳಿಗೆ – ರೂ. 100

ಪ.ಜಾತಿ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ –

• ಪುರುಷ ಅಭ್ಯರ್ಥಿಗಳಿಗೆ – ರೂ. 100
• ಮಹಿಳಾ ಅಭ್ಯರ್ಥಿಗಳಿಗೆ / ತೃತೀಯ ಲಿಂಗ ಅಭ್ಯರ್ಥಿಗಳಿಗೆ – ರೂ. 50

• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಯುಪಿಐ, NEFT, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು. ಅಥವಾ
ಚಲನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ/ ಕೆನರಾ ಬ್ಯಾಂಕ್/ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ/ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 02, 2026

Karnataka Forest Department Recruitment 2026 : Important Links

CIRCLEWISE OFFICIAL NOTIFICATION CLICK HERE
SHORT NOTIFICATIONCLICK HERE
APPLY ONLINE CLICK HERE ಆಗಸ್ಟ್ 01 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment