Karnataka Gramin Bank Recruitment 2021 : ಆರ್ಥಿಕ ಸಲಹೆಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Karnataka Gramin Bank Recruitment 2021 : ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಖಾಲಿಯಿರುವ ಆರ್ಥಿಕ ಸಲಹೆಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಾನ, ಉದ್ಯೋಗ ಸ್ಥಳ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Gramin Bank Recruitment 2021 : Details of Vacancies

ಹುದ್ದೆ : ಆರ್ಥಿಕ ಸಲಹೆಗಾರ

ಕರ್ತವ್ಯ ಸ್ಥಳ : ಕರ್ನಾಟಕದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ಚಾಮರಾಜನಗರ ಜಿಲ್ಲೆಯ ಎಳಂದೂರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಆಳಂದಾದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಕರ್ನಾಟಕದ ಐದು ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,100 ವೇತನ ನೀಡಲಾಗುತ್ತದೆ ಹಾಗೂ ಪ್ರಯಾಣ ಭತ್ಯೆ ರೂ. 3,000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಾನ : ಬ್ಯಾಂಕಿನ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಮಾಹಿತಿ : DKMUL Recruitment 2021 | 80 ಸಹಾಯಕ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಆಯ್ಕೆ ವಿಧಾನ : ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಹುದ್ದೆ ತಾತ್ಕಾಲಿಕವಾಗಿದ್ದು ಮೂರು ವರ್ಷಗಳ ಅವಧಿಗಾಗಿರುತ್ತದೆ.

ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಖಾಲಿಯಿರುವ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ಗ್ರಾಮೀಣ ಬ್ಯಾಂಕ್, ಪ್ರಧಾನ ಕಛೇರಿ, ಬಳ್ಳಾರಿ. ದೂರವಾಣಿ ಸಂಖ್ಯೆ : 08392 236428

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 15, 2021

Karnataka Gramin Bank Recruitment 2021 : Important Links

ಅಧಿಸೂಚನೆ : Click Here

ವೆಬ್‌ಸೈಟ್ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook