ಕರ್ನಾಟಕ ಹೈಕೋರ್ಟ್ ನೇಮಕಾತಿ 2026 – Karnataka High Court Civil Judges Recruitment 2026

ಕರ್ನಾಟಕ ಹೈಕೋರ್ಟ್ ನೇಮಕಾತಿ 2026 - Karnataka High Court Civil Judges Recruitment 2026

Karnataka High Court Civil Judges Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ದಿನಾಂಕ 16ನೇ ಏಪ್ರಿಲ್ 2026ರ ಅಧಿಸೂಚನೆ ಪ್ರಕಾರ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಅವರ ಹಿಂದಿನ ಅರ್ಜಿಯನ್ನು ಪ್ರಸ್ತುತ ಅಧಿಸೂಚನೆಯಡಿ ಸಲ್ಲಿಸಲಾದ ಅರ್ಜಿಯೆಂದು ಪರಿಗಣಿಸಲಾಗುವುದು.

Karnataka High Court Civil Judges Recruitment 2026 : Details of Vacancies

ಹುದ್ದೆ :

ಸಿವಿಲ್ ನ್ಯಾಯಾಧೀಶರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 91 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾಗಿರುವ ವಿಶ್ವವಿದ್ಯಾಲಯವು ನೀಡಿರುವ ಕಾನೂನು ಪದವಿಯನ್ನು ಹೊಂದಿರಬೇಕು.
  • ಭಾರತದ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಗಳು ಅಥವಾ ದೇಶದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರಾಗಿ ವೃತ್ತಿ ನಿರ್ವಹಿಸುತ್ತಿರಬೇಕು ಹಾಗೂ ಕನಿಷ್ಠ ಒಂದು ವರ್ಷದ ಅವಧಿಗೆ ವಕೀಲರಾಗಿ ವೃತ್ತಿ ನಿರ್ವಹಿಸಿದ ಅನುಭವ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರ ಅಥವಾ ದೇಶದ ರಾಜ್ಯ ಸರ್ಕಾರಗಳ ಪೂರ್ಣಾವಧಿ ನೌಕರರಾಗಿ ಸಾರ್ವಜನಿಕ ಅಭಿಯೋಜಕರು/ ಸಹಾಯಕ ಸಾರ್ವಜನಿಕ ಅಭಿಯೋಜಕರು/ ಸರ್ಕಾರಿ ವಕೀಲರು ಆಗಿ ಕಾರ್ಯನಿರ್ವಹಿಸುತ್ತಿರಬೇಕು ಹಾಗೂ ಕನಿಷ್ಠ ಒಂದು ವರ್ಷದ ಅವಧಿಗೆ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಹುದ್ದೆಗಳ ನೇಮಕಾತಿ 2026

ವಯೋಮಾನ :

  • ಕನಿಷ್ಠ 18 ವರ್ಷ ಪೂರೈಸಿರಬೇಕು.
  • ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಪ್ರವರ್ಗ1 ಅಭ್ಯರ್ಥಿಗಳು – ಗರಿಷ್ಠ 45 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ :

ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 77,840 ರಿಂದ ರೂ. 1,36,520 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಮೌಖಿಕ ಸಂದರ್ಶನ
  • ಕಂಪ್ಯೂಟರ್ ಜ್ಞಾನದ ಪರೀಕ್ಷೆ

ಉದ್ಯೋಗ ಮಾಹಿತಿ : ಕೆಇಎಯಿಂದ ಗ್ರೂಪ್-ಬಿ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಉಚ್ಚ ನ್ಯಾಯಾಲಯವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಕರ್ನಾಟಕ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಪರೀಕ್ಷಾ ಶುಲ್ಕದ ವಿವರ :

ಪೂರ್ವಭಾವಿ ಪರೀಕ್ಷೆ ಶುಲ್ಕ –

• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1000
• ಪ.ಜಾತಿ/ಪ.ಪಂ/ಪ್ರವರ್ಗ-1, ಅಂಗವಿಕಲತೆಯುಳ್ಳ ಅಭ್ಯರ್ಥಿಗಳು – ರೂ. 500

ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಗಳಿಸಿದಲ್ಲಿ ಮುಖ್ಯ ಲಿಖಿತ ಪರೀಕ್ಷೆ ಶುಲ್ಕ –

• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪ.ಜಾತಿ/ಪ.ಪಂ/ಪ್ರವರ್ಗ-1, ಅಂಗವಿಕಲತೆಯುಳ್ಳ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇ-ಪಾವತಿ ಗೇಟ್ ವೇ ಮೂಲಕ ನಿಗದಿತ ಶುಲ್ಕವನ್ನು ಸಂದಾಯ ಮಾಡತಕ್ಕದ್ದು. ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 16, 2026 ನವೆಂಬರ್ 26, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 15, 2026 ಡಿಸೆಂಬರ್ 25, 2026
• ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ : ಮೇ 15, 2026 ಡಿಸೆಂಬರ್ 26, 2026

Karnataka High Court Recruitment 2026 : Important Links

NOTIFICATION (23/11/2026)CLICK HERE
NOTIFICATION (16/04/2026)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment