
Karnataka High Court Group D Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka High Court Group D Recruitment 2026 : Details of Vacancies
ಹುದ್ದೆ :
ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಲಿಪ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ, ಧೋಬಿ.
ಕರ್ತವ್ಯ ಸ್ಥಳ :
ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ ಅಥವಾ ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಿಗೆ ನಿಯೋಜಿಸಬಹುದು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 101 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್) | 85+8 |
| ಲಿಪ್ಟ್ ಅಟೆಂಡರ್ | 5 |
| ಸಹಾಯಕ ಬೈಂಡರ್ | 1 |
| ದರ್ಜಿ | 1 |
| ಧೋಬಿ | 1 |
ಶೈಕ್ಷಣಿಕ ಅರ್ಹತೆ :
ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್) –
10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಲಿಪ್ಟ್ ಅಟೆಂಡರ್ –
10ನೇ ತರಗತಿ ತೇರ್ಗಡೆ ಮತ್ತು ಲಿಪ್ಟ್ ಮೆಕ್ಯಾನಿಸಂನಲ್ಲಿ ಅನುಭವ ಹೊಂದಿರಬೇಕು.
ಸಹಾಯಕ ಬೈಂಡರ್ –
10ನೇ ತರಗತಿ ತೇರ್ಗಡೆ ಮತ್ತು ಬೈಂಡಿಂಗ್ ಕೆಲಸದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ದರ್ಜಿ –
10ನೇ ತರಗತಿ ತೇರ್ಗಡೆ ಮತ್ತು ದರ್ಜಿ ಕೆಲಸದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಧೋಬಿ –
10ನೇ ತರಗತಿ ತೇರ್ಗಡೆ ಮತ್ತು ಧೋಬಿ ಕೆಲಸದಲ್ಲಿ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಅಭ್ಯರ್ಥಿಗಳಿಗೆ- ಗರಿಷ್ಠ 45 ವರ್ಷ
ವೇತನ :
| ಹುದ್ದೆ | ವೇತನ |
| ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಸಹಾಯಕ ಬೈಂಡರ್, ಧೋಬಿ | ರೂ. 19,900 – ರೂ. 63,200 |
| ಲಿಪ್ಟ್ ಅಟೆಂಡರ್, ದರ್ಜಿ | ರೂ. 21,700 – ರೂ. 69,100 |
ಆಯ್ಕೆ ವಿಧಾನ :
ಅರ್ಹತಾ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಉಚ್ಛ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ/ಪ.ಪಂ/ಪ್ರ.1/ಅಂಗವಿಕಲ ಅಭ್ಯರ್ಥಿಗಳು – ರೂ. 100
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಎಸ್.ಬಿ.ಐ ಆನ್ಲೈನ್ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 21, 2026
Karnataka High Court Group D Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.