Karnataka High Court Recruitment 2021 – 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Karnataka High Court Recruitment 2021 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2021 : Details of Vacancies

ಹುದ್ದೆ : ದ್ವಿತೀಯ ದರ್ಜೆ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 142 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿದ ಮೂಲವೃಂದ124+3
ಸ್ಥಳೀಯ ವೃಂದ14+1

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳ ವಯಸ್ಸು ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರೇ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 200, ಉಳಿದ ಅಭ್ಯರ್ಥಿಗಳು ರೂ.350 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 24, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 24, 2021
ಆನ್‌ಲೈನ್‌ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 27, 2021

Karnataka High Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Karnataka High Court Recruitment 2021 – 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ”

Leave a Comment