Karnataka High Court Recruitment 2021 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka High Court Recruitment 2021 : Details of Vacancies
ಹುದ್ದೆ : ಸಿವಿಲ್ ನ್ಯಾಯಾಧೀಶರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 94 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು
ವಯೋಮಾನ : ಅಭ್ಯರ್ಥಿಗಳ ವಯಸ್ಸು ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಸಂದರ್ಭದಲ್ಲಿ 38 ವರ್ಷ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು
ವಯೋಮಿತಿ ಸಡಿಲಿಕೆ : ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,700 ರಿಂದ ರೂ. 44,770 ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ : ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಮುಖ್ಯ ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ
ಉದ್ಯೋಗ ಮಾಹಿತಿ : Saraswat Cooperative Bank Recruitment 2021 : 150 ಕ್ಲರಿಕಲ್ ಹುದ್ದೆಗಳ ಭರ್ತಿ
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ : ಪ್ರವರ್ಗ 2ಎ,2ಬಿ,3ಎ,3ಬಿ, ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 500, ಎಸ್ಸಿ, ಎಸ್ಟಿ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು ರೂ.250 ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 26, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 27, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2021
Karnataka High Court Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.