Karnataka High Court Recruitment 2021 : Apply Now 21 Post

Karnataka High Court Recruitment 2021 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2021 : Details of Vacancies

ಹುದ್ದೆ : ಜಿಲ್ಲಾ ನ್ಯಾಯಾಧೀಶರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕಾನೂನು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಹೈಕೋರ್ಟ್‌ನಲ್ಲಿ ಅಥವಾ ಅಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಕಡಿಮೆ ಇಲ್ಲದಂತೆ 7 ವರ್ಷಗಳಿಂದ ಅಡ್ವೋಕೇಟ್‌ ಆಗಿ ಪ್ರ್ಯಾಕ್ಟೀಸ್ ಮಾಡಿರಬೇಕು.

ವಯೋಮಾನ : ಅಭ್ಯರ್ಥಿಗಳ ವಯಸ್ಸು ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ : ಮಾಜಿ ಸೈನಿಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 51,550 ರಿಂದ ರೂ. 63,070 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಪ್ರಿಲಿಮಿನರಿ ಪರೀಕ್ಷೆಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.500, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ರೂ.250 ಪಾವತಿಸಬೇಕು. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದಲ್ಲಿ ಮುಖ್ಯ ಪರೀಕ್ಷೆ ತೆಗೆದುಕೊಳ್ಳಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1000, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ರೂ.750 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 09, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 09, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 14, 2021

Karnataka High Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment