Karnataka High Court Recruitment 2022 – Apply Online for 150 Group-D Posts

Karnataka High Court Recruitment 2022 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2022 : Details of Vacancies

ಹುದ್ದೆ : ಗ್ರೂಪ್-ಡಿ [ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್)]

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 129
ಸ್ಥಳೀಯ ವೃಂದ 21

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 – ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಗರಿಷ್ಠ 10 ಅಂಕಗಳನ್ನು ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ.200 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 17, 2022
ಆನ್‌ಲೈನ್‌ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 21, 2022

Karnataka High Court Recruitment 2022 : Important Links

Notification RPCClick Here
Notification LCClick Here
Apply Online RPCClick Here
Apply Online LCClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment