Karnataka High Court Recruitment 2022 – Apply Online for 54 Stenographer Posts

Karnataka High Court Recruitment 2022 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2022: Details of Vacancies

ಹುದ್ದೆ : ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 54 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿದ ಮೂಲ ವೃಂದ44
ಸ್ಥಳೀಯ ವೃಂದ10

ಶೈಕ್ಷಣಿಕ ಅರ್ಹತೆ :
1. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್‌.ಎಸ್.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಥವಾ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಟೆಕ್ನಿಕಲ್ ಬೋರ್ಡ್ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾದಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು‌.
2. ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಆಂಗ್ಲ ಶೀಘ್ರಲಿಪಿ ಪ್ರೊಫಿಶಿಯಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
3. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
4. ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳ ವಯಸ್ಸು ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರೇ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 250, ಉಳಿದ ಅಭ್ಯರ್ಥಿಗಳು ರೂ.500 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 07, 2022
ಆನ್‌ಲೈನ್‌ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 12, 2022

Karnataka High Court Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment