Karnataka High Court Recruitment 2023 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka High Court Recruitment 2023 : Details of Vacancies
ಹುದ್ದೆ : ಕೇಬಲ್ ಆಪರೇಟರ್ (ಗ್ರೂಪ್-ಡಿ)
ಕರ್ತವ್ಯ ಸ್ಥಳ : ಕೇಬಲ್ ಆಪರೇಟರ್ ಹುದ್ದೆಗೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ, ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಿಗೆ ನಿಯೋಜಿಸಬಹುದು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ಅದಕ್ಕೆ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಐ.ಟಿ.ಐ (ಎಲೆಕ್ಟ್ರಾನಿಕ್ಸ್/ ಎಲೆಕ್ಟಿಕಲ್/ ಐಟಿ ಯನ್ನು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಹೊಂದಿರಬೇಕು).
ಅಭ್ಯರ್ಥಿಗಳು ನೆಟ್ವರ್ಕ್ ನಿರ್ವಹಣೆ, VLAN, Switch, Router, Modem Configuration ಮತ್ತು LAN ಕೆಲಸದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದ್ದಂತೆ ಅನುಭವ ಹೊಂದಿರಬೇಕು.
ಮತ್ತು
CCNA/CCNP ಪ್ರಧಾನ ಮಾಡುವ ಪ್ರಮಾಣಪತ್ರವನ್ನು ಮಾನ್ಯತೆ ಪಡೆದ ಮತ್ತು ಪ್ರತಿಷ್ಠಿತ ಸಂಸ್ಥೆಯಿಂದ ಹೊಂದಿರತಕ್ಕವರು ಅಪೇಕ್ಷಣೀಯ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2023
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 – ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ನೇರ ನೇಮಕಾತಿ, ಸಂದರ್ಶನದ ಮೂಲಕ, ಅರ್ಹತೆಗಳು ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಉಚ್ಛ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು – ರೂ. 100
• ಉಳಿದ ಅಭ್ಯರ್ಥಿಗಳು – ರೂ.200
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2023
ಆನ್ಲೈನ್ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 20, 2023
Karnataka High Court Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.