Karnataka High Court Recruitment 2023 – Apply Online for 39 Driver Posts

Karnataka High Court Recruitment 2023 – Karnataka High Court Driver Recruitment 2023 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯ ಇರುವ ವಾಹನ ಚಾಲಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2023 : Details of Vacancies

ಹುದ್ದೆ : ವಾಹನ ಚಾಲಕರು

ಕರ್ತವ್ಯ ಸ್ಥಳ : ಚಾಲಕರ ಹುದ್ದೆಗೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ ಅಥವಾ ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಲ್ಲಾಗಲೀ ನಿಯೋಜಿಸಲಾಗುವುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 39 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿದ ಮೂಲ ವೃಂದ 37
ಸ್ಥಳೀಯ ವೃಂದ 2

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಭಾರಿ ಪ್ರಯಾಣಿಕ ಮೋಟಾರು ವಾಹನ ಅಥವಾ ಸರಕು ಸಾಗಣೆ ಮಾಡುವ ಭಾರೀ ಪ್ರಮಾಣ ವಾಹನವನ್ನು ಚಾಲನೆ ಮಾಡುವ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಹಾಗೂ ಚಾಲನೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ/ ವಾಹನ ಚಾಲನಾ ಪರೀಕ್ಷೆ/ ಮೌಖಿಕ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು – ರೂ.250
• ಉಳಿದ ಅಭ್ಯರ್ಥಿಗಳು – ರೂ.500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 06, 2023
ಆನ್‌ಲೈನ್‌ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 12, 2023

Karnataka High Court Recruitment 2023 : Important Links

NOTIFICATION – RPCCLICK HERE
NOTIFICATION – LCCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment