Karnataka High Court Recruitment 2023 – Apply Online for 57 Civil Judge Posts

Karnataka High Court Recruitment 2023 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2023 : Details of Vacancies

ಹುದ್ದೆ : ಸಿವಿಲ್ ನ್ಯಾಯಾಧೀಶರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 57 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023

ವಯೋಮಾನ :
• ಅನುಸೂಚಿತ ಜಾತಿ, ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಇತರೆ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ : ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,700 ರಿಂದ ರೂ. 44,770 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಮುಖ್ಯ ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ಡ್ರೈವರ್ ಹುದ್ದೆಗಳ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಪರೀಕ್ಷಾ ಶುಲ್ಕದ ವಿವರ :
• ಪೂರ್ವಭಾವಿ ಪರೀಕ್ಷೆಗೆ
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1000
ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು – ರೂ. 500
• ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದಲ್ಲಿ ಮುಖ್ಯ ಪರೀಕ್ಷೆಗೆ
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 09, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2023
ಆನ್‌ಲೈನ್‌, ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 13, 2023

Karnataka High Court Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment