ಕರ್ನಾಟಕ ಹೈಕೋರ್ಟ್ ನೇಮಕಾತಿ 2026 – Karnataka High Court Recruitment 2026

ಕರ್ನಾಟಕ ಹೈಕೋರ್ಟ್ ನೇಮಕಾತಿ 2026 - Karnataka High Court Recruitment 2026

Karnataka High Court Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಈ ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸುವುದು ಮತ್ತು ಶುಲ್ಕವನ್ನು ಪಾವತಿಸುವ ಅವಶ್ಯಕತೆಯಿರುವುದಿಲ್ಲ.

Karnataka High Court Recruitment 2026 : Details of Vacancies

ಹುದ್ದೆ :

ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು)

ಕರ್ತವ್ಯ ಸ್ಥಳ :

ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ, ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಿಗೆ ನಿಯೋಜಿಸಲಾಗುವುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 85 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಕಲ್ಯಾಣ ಕರ್ನಾಟಕ ವೃಂದ12
ಉಳಿದ ಮೂಲ ವೃಂದ73

ಶೈಕ್ಷಣಿಕ ಅರ್ಹತೆ :

  • ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ /ವ್ಯವಹಾರ ನಿರ್ವಹಣೆ / ಕಂಪ್ಯೂಟರ್ ಅಪ್ಲಿಕೇಷನ್ / ವ್ಯವಹಾರ ಆಡಳಿತ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
  • ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಅಥವಾ ಆಂಗ್ಲ ಶೀಘ್ರಲಿಪಿ ಪ್ರೊಫಿಶಿಯಸ್ಸಿ ಮತ್ತು ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮತ್ತು
  • ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ಗ್ರೂಪ್-ಡಿ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು – ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಶೀಘ್ರಲಿಪಿ ಪರೀಕ್ಷೆ
• ಸಂದರ್ಶನ

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ದತ್ತಾಂಶ ನಮೂದು ಸಹಾಯಕರು ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ಅಭ್ಯರ್ಥಿಗಳು – ರೂ. 500
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ‌. 500
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ಅಂಗವಿಕಲ ಅಭ್ಯರ್ಥಿಗಳು – ರೂ. 250

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಎಸ್.ಬಿ.ಐ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 16, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 15, 2026 ಜುಲೈ 30, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 15, 2026 ಜುಲೈ 30, 2026

Karnataka High Court Recruitment 2026 : Important Links

REVISED NOTIFICATION CLICK HERE
NOTIFICATIONCLICK HERE
APPLY ONLINECLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment