ಕರ್ನಾಟಕ ಹೈಕೋರ್ಟ್ ನೇಮಕಾತಿ 2026 – Karnataka High Court SDA Recruitment 2026

Karnataka High Court SDA Recruitment 2026

Karnataka High Court SDA Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court SDA Recruitment 2026 : Details of Vacancies

ಹುದ್ದೆ :

ದ್ವಿತೀಯ ದರ್ಜೆ ಸಹಾಯಕರು

ಕರ್ತವ್ಯ ಸ್ಥಳ :

ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ ಅಥವಾ ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಲ್ಲಾಗಲೀ ನಿಯೋಜಿಸಬಹುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 20 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿದ ಮೂಲ ವೃಂದ 18
ಕಲ್ಯಾಣ ಕರ್ನಾಟಕ ಪ್ರದೇಶ 2

ಶೈಕ್ಷಣಿಕ ವಿದ್ಯಾರ್ಹತೆ :

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ಸ್/ ವ್ಯವಹಾರ ಆಡಳಿತ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ವಯೋಮಿತಿ :

  • ಕನಿಷ್ಠ 18 ವರ್ಷ
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಮಾದರಿ –

ವಿವರಗಳುಗರಿಷ್ಠ ಅಂಕಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪಡೆಯಬೇಕಾದ ಕನಿಷ್ಠ ಅಂಕಗಳು
ಆಂಗ್ಲ ಭಾಷೆಯಲ್ಲಿ ಪ್ರಬಂಧ3020
ಕನ್ನಡದಿಂದ ಆಂಗ್ಲ ಭಾಷೆಗೆ ಅನುವಾದ 3020
ಸಾಮಾನ್ಯ ಜ್ಞಾನ ಪರೀಕ್ಷೆ 2010
ಸಂದರ್ಶನ2010
ಒಟ್ಟು10060

ಉದ್ಯೋಗ ಮಾಹಿತಿ : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಉಚ್ಛ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 350
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 350
  • ಪ.ಜಾತಿ/ಪ.ಪಂ/ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು – ರೂ. 200

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 13, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 11, 2026

Karnataka High Court SDA Recruitment 2026 : Important Links

NOTIFICATIONCLICK HERE
APPLY ONLINE CLICK HERE ಆಗಸ್ಟ್ 13 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment