Karnataka Land Surveyor Recruitment 2021 – Apply Now 3000 Post

Karnataka Land Surveyor Recruitment 2021 : ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Land Surveyor Recruitment 2021 : Details of Vacancies

ಹುದ್ದೆ : ಭೂಮಾಪಕರು (ಲ್ಯಾಂಡ್ ಸರ್ವೇಯರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
• ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ
• ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ, ಅಥವಾ
• ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
• ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೇ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ಸಂದರ್ಶನ ಇರುವುದಿಲ್ಲ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2021

ಲ್ಯಾಂಡ್ ಸರ್ವೇಯರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 01, 2021 ಡಿಸೆಂಬರ್ 28, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 31, 2021 ಜನವರಿ 21, 2022

Karnataka Land Surveyor Recruitment 2021 : Important Links

ಅಧಿಸೂಚನೆ (New) : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment