ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2023 – Karnataka Legislative Assembly Driver Recruitment 2023

Karnataka Legislative Assembly Driver Recruitment 2023 : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ ಗುರುತಿಸಲಾದ ವಾಹನ ಚಾಲಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Legislative Assembly Driver Recruitment 2023 : Details of Vacancies

ಹುದ್ದೆ : ವಾಹನ ಚಾಲಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಅಂಚೆ ಇಲಾಖೆಯಿಂದ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಬೃಹತ್ ನೇಮಕಾತಿ 2023

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಈ ಎರಡೂ ವಿಧಾನಗಳನ್ನು ಅನುಸರಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುವುದು.

ಅನುಭವ : ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು (03) ವರ್ಷಗಳ ಅನುಭವ ಹೊಂದಿರಬೇಕು.

ಹುದ್ದೆಯ ವರ್ಗೀಕರಣ :

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2023 - Karnataka Legislative Assembly Driver Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದುಕೊಳ್ಳಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

ನಿಗದಿತ ಅರ್ಜಿ ಶುಲ್ಕದ ವಿವರ : ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 05, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 08, 2023

Karnataka Legislative Assembly Driver Recruitment 2023 : Important Links

NOTIFICATIONCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment