Karnataka Legislative Assembly Recruitment 2022 – Apply for 43 JA, Computer Operator and Various Posts

Karnataka Legislative Assembly Recruitment 2022 : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Legislative Assembly Recruitment 2022 : Details of Vacancies

ಹುದ್ದೆ : ವರದಿಗಾರರು, ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕರು, ಬೆರಳಚ್ಚುಗಾರರು, ದಲಾಯತ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 43 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ವರದಿಗಾರರು237900-70850
ಕಂಪ್ಯೂಟರ್ ಆಪರೇಟರ್430350-58250
ಕಿರಿಯ ಸಹಾಯಕರು1021400-42000
ಬೆರಳಚ್ಚುಗಾರರು121400-42000
ದಲಾಯತ್2617000-28950

ಶೈಕ್ಷಣಿಕ ಅರ್ಹತೆ :

ವರದಿಗಾರರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಪರೇಟರ್ – ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಬ್ಯಾಚುಲರ್ಸ್ ಪದವಿ (ಬಿ.ಸಿ.ಎ) ಅಥವಾ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಪದವಿ ಪಡೆದಿರಬೇಕು.
ಕಿರಿಯ ಸಹಾಯಕರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.
ಬೆರಳಚ್ಚುಗಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದವರಿಗೆ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಗಣಕಯಂತ್ರದ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ದಲಾಯತ್ – 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

ನಿಗದಿತ ಅರ್ಜಿ ಶುಲ್ಕದ ವಿವರ : ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 27, 2022

Karnataka Legislative Assembly Recruitment 2022 : Important Links

ಅಧಿಸೂಚನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Karnataka Legislative Assembly Recruitment 2022 – Apply for 43 JA, Computer Operator and Various Posts”

Leave a Comment