ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವರದಿಗಾರರು ಹುದ್ದೆಗಳ ನೇಮಕಾತಿ 2024 – Karnataka Legislative Assembly Reporter Recruitment 2024

Karnataka Legislative Assembly Reporter Recruitment 2024 : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವರದಿಗಾರರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Legislative Assembly Reporter Recruitment 2024 : Details of Vacancies

ಹುದ್ದೆ : ವರದಿಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಕನ್ನಡ ವರದಿಗಾರರು 5
ಆಂಗ್ಲ ವರದಿಗಾರರು 1

ಶೈಕ್ಷಣಿಕ ಅರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
• ಕನ್ನಡ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
• ಆಂಗ್ಲ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಆಂಗ್ಲ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಿಡಿಓ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಈ ಎರಡೂ ವಿಧಾನಗಳನ್ನು ಅನುಸರಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುವುದು.

ಉದ್ಯೋಗ ಮಾಹಿತಿ : ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದುಕೊಳ್ಳಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

ನಿಗದಿತ ಅರ್ಜಿ ಶುಲ್ಕದ ವಿವರ : ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2024

KLA Reporter Recruitment 2024 : Important Links

NOTIFICATION (RPC)CLICK HERE
NOTIFICATION (HK)CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment