Karnataka Lokayukta Recruitment 2024 : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Lokayukta Recruitment 2024 : Details of Vacancies
ಹುದ್ದೆ : ಕ್ಲರ್ಕ್-ಕಂ-ಟೈಪಿಸ್ಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೃಂದ | ಹುದ್ದೆಗಳ ಸಂಖ್ಯೆ |
ಉಳಿಕೆ ಮೂಲ ವೃಂದ | 16 |
ಕಲ್ಯಾಣ ಕರ್ನಾಟಕ ವೃಂದ | 14 |
ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2024
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 41 ವರ್ಷ
• ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100 ರಿಂದ ರೂ. 67,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ನಿಗಧಿಪಡಿಸಲಾದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 250
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 29, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 30, 2024
Karnataka Lokayukta Recruitment 2024 : Important Links
NOTIFICATION-RPC | CLICK HERE |
NOTIFICATION-KKR | CLICK HERE |
APPLY ONLINE-RPC | CLICK HERE |
APPLY ONLINE-KKR | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.