ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ 2026 – Karnataka Lokayukta Recruitment 2026

Karnataka Lokayukta Recruitment 2026

Karnataka Lokayukta Recruitment 2026 : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Lokayukta Recruitment 2026 : Details of Vacancies

ಹುದ್ದೆ :

ಕ್ಲರ್ಕ್-ಕಂ-ಟೈಪಿಸ್ಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 25
ಕಲ್ಯಾಣ ಕರ್ನಾಟಕ ವೃಂದ 1

ಶೈಕ್ಷಣಿಕ ಅರ್ಹತೆ :

  • ಪದವಿ ಪೂರ್ವ ಶಿಕ್ಷಣ ಪರೀಕ್ಷೆ (ಪಿಯುಸಿ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100 ರಿಂದ ರೂ. 67,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ನಿಗಧಿಪಡಿಸಲಾದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇಲೆ ಅರ್ಹತಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೆಇಎಯಿಂದ ಭೂಮಾಪಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 250
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 17, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 17, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 18, 2026

Karnataka Lokayukta Clerk Cum Typist Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment