Karnataka Post Office Recruitment 2022 – Apply Online for 2410 GDS Posts

Karnataka Post Office Recruitment 2022 : ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Post Office Recruitment 2022 – Apply Online for 2410 GDS Posts

Karnataka Post Office Recruitment 2022 : Details of Vacancie

ಹುದ್ದೆ : ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಗ್ರಾಮೀಣ ಡಾಕ್ ಸೇವಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 38,926 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 2,410 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿರಬೇಕು.

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪ.ಜಾ, ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ :

ಹುದ್ದೆವೇತನ
ಬ್ರಾಂಚ್ ಪೋಸ್ಟ್ ಮಾಸ್ಟರ್12,000
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್10,000
ಗ್ರಾಮೀಣ ಡಾಕ್ ಸೇವಕ10,000

ಆಯ್ಕೆ ವಿಧಾನ : 10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನೇರ ನೇಮಕಾತಿ 2022

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 05, 2022

Karnataka Post Office Recruitment 2022 : Important Links

NotificationClick Here
Circlewise Post DetailsClick Here
Apply OnlineClick Here
Shortlisted Candidates ListClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Karnataka Post Office Recruitment 2022 – Apply Online for 2410 GDS Posts

12 thoughts on “Karnataka Post Office Recruitment 2022 – Apply Online for 2410 GDS Posts”

Leave a Comment