Karnataka Post Office Recruitment 2023 – Apply Online for 3036 GDS Posts

Karnataka Post Office Recruitment 2023 – Karnataka Postal Circle Recruitment 2023 : ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Post Office Recruitment 2023 : Details of Vacancies

ಹುದ್ದೆ : ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಗ್ರಾಮೀಣ ಡಾಕ್ ಸೇವಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 3,036 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ 11409 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ :
• ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 12,000 – 29,380
• ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 10,000 – 24,470
• ಗ್ರಾಮೀಣ ಡಾಕ್ ಸೇವಕ ರೂ. 10,000 – 24,470

ಆಯ್ಕೆ ವಿಧಾನ : 10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪ‌.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 27, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2023

Karnataka Post Office Recruitment 2023 : Important Links

NOTIFICATIONCLICK HERE
CIRCLEWISE POST NOTIFICATION CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Karnataka Post Office Recruitment 2023 – Apply Online for 3036 GDS Posts”

Leave a Comment