
Karnataka Post Office Recruitment 2026 – Karnataka Postal Circle Recruitment 2026 : ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Post Office Recruitment 2026 : Details of Vacancies
ಹುದ್ದೆ :
ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 28740 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 1023 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಎಸ್‌ಬಿಐ ಸರ್ಕಲ್ ಬೇಸ್ಡ್ ಆಫೀಸರ್ ನೇಮಕಾತಿ 2026
ವಯೋಮಾನ :
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು
• ಕನಿಷ್ಠ 18 ವರ್ಷ
• ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
| ಹುದ್ದೆ | ವೇತನ |
| ಬ್ರಾಂಚ್ ಪೋಸ್ಟ್ ಮಾಸ್ಟರ್ | ರೂ. 12,000 – ರೂ. 29,380 |
| ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ಡಾಕ್ ಸೇವಕ | ರೂ. 10,000 – ರೂ. 24,470 |
ಆಯ್ಕೆ ವಿಧಾನ :
10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ, ಪ.ಪಂ., ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 31, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 14, 2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2026
Karnataka Post Office Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
| Official Website | indiapost.gov.in |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.