
Karnataka Power Corporation Limited KPCL Recruitment 2025 : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಖಾಲಿ ಇರುವ ಗ್ರೂಪ್-ಎ ಹಾಗೂ ಗ್ರೂಪ್-ಸಿ ದರ್ಜೆಯ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Power Corporation Limited KPCL Recruitment 2025 : Details of Vacancies
ಹುದ್ದೆ :
ಫ್ಯಾಕ್ಟರಿ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಅಕೌಂಟ್ಸ್ ಆಫೀಸರ್, ಬಾಯ್ಲರ್ ಅಟೆಂಡೆಂಟ್ ಗ್ರೇಡ್-2
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಫ್ಯಾಕ್ಟರಿ ಮೆಡಿಕಲ್ ಆಫೀಸರ್ | 2 |
| ಮೆಡಿಕಲ್ ಆಫೀಸರ್ | 1 |
| ಅಕೌಂಟ್ಸ್ ಆಫೀಸರ್ | 1 |
| ಬಾಯ್ಲರ್ ಅಟೆಂಡೆಂಟ್ ಗ್ರೇಡ್-2 | 1 |
ಶೈಕ್ಷಣಿಕ ಅರ್ಹತೆ :
ಫ್ಯಾಕ್ಟರಿ ಮೆಡಿಕಲ್ ಆಫೀಸರ್ –
ವೈದ್ಯಶಾಸ್ತ್ರ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಸ್ನಾತಕ ಪದವಿ (ಎಂಬಿಬಿಎಸ್-ರೆಗ್ಯೂಲರ್)
ಮೆಡಿಕಲ್ ಆಫೀಸರ್ –
ವೈದ್ಯಶಾಸ್ತ್ರ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ ಸ್ನಾತಕ ಪದವಿ (ಎಂಬಿಬಿಎಸ್)
ಅಕೌಂಟ್ಸ್ ಆಫೀಸರ್ –
ಪ್ರಥಮ ದರ್ಜೆಯಲ್ಲಿ ಪದವಿಯ ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ ಕೋರ್ಸ್ ನಲ್ಲಿ ತೇರ್ಗಡೆ.
ಬಾಯ್ಲರ್ ಅಟೆಂಡೆಂಟ್ ಗ್ರೇಡ್-2 –
ಎಸ್.ಎಸ್.ಎಲ್.ಸಿ ಮತ್ತು ಬಾಯ್ಲರ್ ಅಟೆಂಡೆಂಟ್ ಗ್ರೇಡ್-2ನ ಸಾಮರ್ಥ್ಯ ಪ್ರಮಾಣ ಪತ್ರ.
ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2025
ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವೇತನ :
| ಹುದ್ದೆ | ವೇತನ |
| ಫ್ಯಾಕ್ಟರಿ ಮೆಡಿಕಲ್ ಆಫೀಸರ್ | ರೂ. 81,210/- – ರೂ. 2,03,450/- |
| ಮೆಡಿಕಲ್ ಆಫೀಸರ್ | ರೂ. 81,210/- – ರೂ. 2,03,450/- |
| ಅಕೌಂಟ್ಸ್ ಆಫೀಸರ್ | ರೂ. 81,210/- – ರೂ. 2,03,450/- |
| ಬಾಯ್ಲರ್ ಅಟೆಂಡೆಂಟ್ ಗ್ರೇಡ್-2 | ರೂ. 37,160/- – ರೂ. 1,13,400/- |
ಆಯ್ಕೆ ವಿಧಾನ :
ಹುದ್ದೆಗೆ ನಿಗದಿಪಡಿಸಿರುವ ಅರ್ಹತಾದಾಯಕ ಪರೀಕ್ಷೆಗಳಲ್ಲಿ ಪಡೆದಿರುವ ಶೇಕಡವಾರು ಅಂಕಗಳನ್ನು ಒಟ್ಟುಗೂಡಿಸಿ ಅದರ ಶ್ರೇಯಾಂಕ ಮತ್ತು ಜೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅನುಭವ :
ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಇಮೇಲ್ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ :
kpclbacklog@gmail.com
ನಿಗದಿತ ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ :
ಅರ್ಜಿದಾರರು ಅರ್ಜಿ ಶುಲ್ಕವನ್ನು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಬ್ಯಾಂಕ್ ಖಾತೆ ಸಂಖ್ಯೆಗೆ ಪಾವತಿ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 27, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 26, 2025
KPCL Karnataka Recruitment 2025 : Important Links
| NOTIFICATION GROUP-A | CLICK HERE |
| NOTIFICATION GROUP -C | CLICK HERE |
| APPLICATION FORM GROUP -A | CLICK HERE |
| APPLICATION FORM GROUP -C | CLICK HERE |
| Telegram Group Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.