ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೇಮಕಾತಿ 2026 – Karnataka School Education Department Recruitment 2026

Karnataka School Education Department Recruitment 2026

Karnataka School Education Department Recruitment 2026 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಧೀನದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಗ್ರೂಪ್-ಎ ವೃಂದದ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರತ ಅರ್ಹ ಉಪನ್ಯಾಸಕರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka School Education Department Recruitment 2026 : Details of Vacancies

ಹುದ್ದೆ :

ಪ್ರಾಂಶುಪಾಲರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 247 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 216
ಕಲ್ಯಾಣ ಕರ್ನಾಟಕ ವೃಂದ 31

ಅರ್ಹತೆ :

ಶಾಲಾ ಶಿಕ್ಷಣ ಇಲಾಖೆಯ (ಸರ್ಕಾರಿ ಪದವಿಪೂರ್ವ ಕಾಲೇಜುಗಳ) ಉಪನ್ಯಾಸಕರ ವೃಂದದಲ್ಲಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರೈಸಿರಬೇಕು ಮತ್ತು ಖಾಯಂಪೂರ್ವ ಸೇವಾವಧಿಯನ್ನು ತೃಪ್ತಿಕರವಾಗಿ ಪೂರೈಸಿರಬೇಕು.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿವಿಧ ವಿಷಯಗಳ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ, 10 ವರ್ಷಗಳ ಸೇವೆಯನ್ನು ಪೂರೈಸಿರುವ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಿರುವುದರಿಂದ ವಯೋಮಿತಿಯ ಮಿತಿ ಇರುವುದಿಲ್ಲ.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 90,200 ರಿಂದ ರೂ. 1,59,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಪ್ರಾಂಶುಪಾಲರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್‌ಲೈನ್‌ (ಸಿಬಿಟಿ) ಆಫ್‌ಲೈನ್‌-ಒಎಂಆರ್ ಮಾದರಿಯಲ್ಲಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
  • ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 1000
  • ವಿಶೇಷಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 07, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 04, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 05, 2026

KEA Principal Recruitment 2026 : Important Link

NOTIFICATION (RPC)CLICK HERE
NOTIFICATION (KK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment