Karnataka Stamps And Registration Department Recruitment 2022 – Apply for Group D Post

Karnataka Stamps And Registration Department Recruitment 2022 : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Stamps And Registration Department Recruitment 2022 : Details of Vacancies

ಹುದ್ದೆ : ಗ್ರೂಪ್ ಡಿ (ಜವಾನರು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯು ಹೊರಡಿಸಿದ ದಿನಾಂಕದವರೆಗೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಪ್ರಕಟಣೆಯಾದ ದಿನಾಂಕದೊಳಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸ್ವೀಕರಿಸಲಾದ ಅಂಚೆ ಅರ್ಜಿಗಳನ್ನು ಕ್ರೂಢೀಕರಿಸಿ, ಭರ್ತಿ ಮಾಡಿರುವ ಮಾಹಿತಿ/ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ವಿದ್ಯಾರ್ಹತೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಿ ಒಂದು ಜ್ಯೇಷ್ಠತಾ ಪಟ್ಟಿ ಮಾಡಿ ಮತ್ತು 29 ರಿಂದ 40 ವರ್ಷದವರೆಗೆ ವಯೋಮಿತಿವುಳ್ಳ ಅಭ್ಯರ್ಥಿಗಳಿಗೆ ಇನ್ನೊಂದು ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಲಾಗುವುದು ಹಾಗೂ 29 ರಿಂದ 40 ವರ್ಷದ ವಯೋಮಿತಿವುಳ್ಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಪರೀಕ್ಷೆ : ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಒಕ್ಕೂಟದಲ್ಲಿ ನೇರ ನೇಮಕಾತಿ 2022

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಛೇರಿ,
ಕಂದಾಯ ಭವನ, 8ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಜನ್ಮ ದಿನಾಂಕ ದೃಢೀಕರಿಸಿರುವ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರ, ಜಾತಿ ದೃಢೀಕರಿಸುವ ಪ್ರಮಾಣ ಪತ್ರ, ಕನ್ನಡ ಮಾಧ್ಯಮದ ಅಭ್ಯರ್ಥಿ ಆಗಿದ್ದಲ್ಲಿ ಕನ್ನಡ ಮಾಧ್ಯಮ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2022

Karnataka Stamps And Registration Department Recruitment 2022 : Important Links

ಅಧಿಸೂಚನೆ & ಅರ್ಜಿ ನಮೂನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

2 thoughts on “Karnataka Stamps And Registration Department Recruitment 2022 – Apply for Group D Post”

Leave a Comment