Karnataka State Khadi And Village Industries Board Recruitment 2021 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಅಗತ್ಯವಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka State Khadi And Village Industries Board Recruitment 2021 : Details of Vacancies
ಹುದ್ದೆ : ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 29 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು | 02 | 45300-88300 |
ಪ್ರಥಮ ದರ್ಜೆ ಸಹಾಯಕರು | 09 | 27650-52650 |
ತಾಂತ್ರಿಕ ಮೇಲ್ವಿಚಾರಕರು | 05 | 27650-52650 |
ತಾಂತ್ರಿಕ ಸಹಾಯಕರು | 13 | 21400-42000 |
ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಹುದ್ದೆಗೆ ಸ್ನಾತಕ ಪದವಿಯನ್ನು ಹೊಂದಿರಬೇಕು.
• ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಯಾವುದೇ ಪದವಿ ಜೊತೆಗೆ ಅಂಗೀಕೃತ ಸಂಸ್ಥೆಯಿಂದ ಮೂರು ತಿಂಗಳುಗಳಿಗಿಂತ ಕಡಿಮೆ ಇಲ್ಲದಂತೆ ಮೂಲ ಕಂಪ್ಯೂಟರ್ ತರಬೇತಿಯಲ್ಲಿ ತೇರ್ಗಡೆಯಾಗಿರಬೇಕು.
• ತಾಂತ್ರಿಕ ಮೇಲ್ವಿಚಾರಕರು ಹುದ್ದೆಗೆ ಬಿ.ಎಸ್ಸಿ ಪದವಿ ಹೊಂದಿರಬೇಕು ಅಥವಾ ಭಾರತದಲ್ಲಿ ಕಾನೂನಿನ ಮೂಲಕ ಅಂಗೀಕೃತವಾದ ಸಂಸ್ಥೆಗಳಿಂದ ಮೆಕಾನಿಕಲ್/ ಎಲೆಕ್ಟ್ರಿಕಲ್/ ಸಿವಿಲ್/ ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಟೆಲಿಕಮ್ಯೂನಿಕೆಶನ್/ಆಟೋ ಮೊಬೈಲ್/ ಲೆದರ್ ಟೆಕ್ನಾಲಜಿಯಲ್ಲಿ ಡಿಪ್ಲೋಮಾವನ್ನು ಪಡೆದಿರಬೇಕು.
• ತಾಂತ್ರಿಕ ಸಹಾಯಕರು ಹುದ್ದೆಗೆ ಯಾವುದೇ ವಿಭಾಗದಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು, ಉಡುಪಿ ಸ್ಥಳಗಳಲ್ಲಿ ನಡೆಸಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ ನೇಮಕಾತಿ
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್‌ಸಿ / ಎಸ್ಟಿ / ಪ್ರವರ್ಗ1/ ಮಾಜಿ ಸೈನಿಕ ಅಭ್ಯರ್ಥಿ ರೂ. 400
• ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ರೂ. 800
• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 25, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 24, 2021 ನವೆಂಬರ್ 30, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 24, 2021 ನವೆಂಬರ್ 30, 2021
Karnataka State Khadi And Village Industries Board Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Ok
Ok
Exam yavag erutte edu
29-01-2022