Karnataka University Dharwad Recruitment 2021 : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka University Dharwad Recruitment 2021 : Details of Vacancies
ಹುದ್ದೆ : ಸಹಾಯಕ ನಿರ್ದೇಶಕರು, ಕಾರ್ಯಾಗಾರ ಅಧಿಕಾರಿಗಳು/ವ್ಯವಸ್ಥಾಪಕರು, ಕಿರಿಯ ಇಂಜಿನಿಯರ್ (ಸಿವಿಲ್), ವರ್ಕ್ ಸೂಪರ್ವೈಸರ್, ಇಲೆಕ್ಟ್ರಿಷಿಯನ್, ಕಾರ್ಪೆಂಟರ್, ಟರ್ನರ್, ಫಿಟ್ಟರ್, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸಹಾಯಕ (ಕಾನೂನು ಕೋಶ), ಪ್ಲೇಸಮೆಂಟ್ ಅಧಿಕಾರಿ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಸಹಾಯಕ ನಿರ್ದೇಶಕರು ಹುದ್ದೆಗೆ ಯಾವುದೇ ಪದವಿ ಹೊಂದಿರಬೇಕು
• ಕಾರ್ಯಗಾರ ಅಧಿಕಾರಿಗಳು ಹುದ್ದೆಗೆ ಮ್ಯಾಕ್ಯಾನಿಕಲ್ ಅಥವಾ ಇನ್ಸ್ಟ್ರುಮೆಂಟೇಷನ್ ನಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
• ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಬಿಇ ಸಿವಿಲ್ ಪದವಿ ಹೊಂದಿರಬೇಕು.
• ವರ್ಕ್ ಸೂಪರ್ವೈಸರ್ ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್ 3 ವರ್ಷಗಳ ಡಿಪ್ಲೊಮಾ ಆಗಿರಬೇಕು.
• ಇಲೆಕ್ಟ್ರಿಷಿಯನ್ ಹುದ್ದೆಗೆ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ ಇಲೆಕ್ಟ್ರಿಕಲ್ ಉತ್ತೀರ್ಣರಾಗಿರಬೇಕು
• ಕಾರ್ಪೆಂಟರ್ ಹುದ್ದೆಗೆ ಕಾರ್ಪೆಂಟರಿ ಕೊರ್ಸಿನಲ್ಲಿ ಐಟಿಐ ಆಗಿರಬೇಕು.
• ಟರ್ನರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ ಟರ್ನರ್ ಉತ್ತೀರ್ಣರಾಗಿರಬೇಕು.
• ಫಿಟ್ಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ ಫಿಟ್ಟರ್ ಉತ್ತೀರ್ಣರಾಗಿರಬೇಕು.
• ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹುದ್ದೆಗೆ ಬಿಎಸ್ಸಿ ಅಥವಾ ಎಂಎಸ್ಸಿ ತೋಟಗಾರಿಕೆ ವಿಷಯದಲ್ಲಿ ಪದವಿ ಹೊಂದಿರಬೇಕು
• ಸಹಾಯಕ (ಕಾನೂನು ಕೋಶ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.
• ಪ್ಲೇಸ್ಮೆಂಟ್ ಅಧಿಕಾರಿ ಹುದ್ದೆಗೆ ಎಂಬಿಎ ಪದವಿ ಪಡೆದಿರಬೇಕು.
ಅನುಭವ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಸೇವಾ ಅನುಭವ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾ/ಪ.ಪಂ/ಪ್ರ~1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : NWDA Recruitment 2021 : 62 ಅಕೌಂಟ್ಸ್ ಆಫೀಸರ್, ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ರಿಂದ ರೂ. 25,000ವರೆಗೂ ವೇತನ ನೀಡಲಾಗುತ್ತದೆ
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ವಿಭಾಗ,
ಪಾವಟೆನಗರ, ಧಾರವಾಡ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 05, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 05, 2021
Karnataka University Dharwad Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.