KCC Bank Dharwad Recruitment 2022 – Apply Online for 87 Clerk Posts

KCC Bank Dharwad Recruitment 2022 : ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಧಾರವಾಡ ಇದರಲ್ಲಿ ಖಾಲಿ ಇರುವ ಕ್ಲರ್ಕ್ (ಸಹಾಯಕರು) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KCC Bank Dharwad Recruitment 2022 : Details of Vacancies

ಹುದ್ದೆ : ಕ್ಲರ್ಕ್ (ಸಹಾಯಕರು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಧಾರವಾಡದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 87 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ.ಜಾತಿ/ ಪ.ಪಂ./ಪ್ರ1 ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 55% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಶನ್ ಮತ್ತು ಅಪ್ಲಿಕೇಶನ್ ನಲ್ಲಿ ಜ್ಞಾನ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಮಾಜಿ ಸೈನಿಕ (15 ವರ್ಷ ಸೇವೆ ಸಲ್ಲಿಸಿರಬೇಕು) ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 ರಿಂದ ರೂ. 29,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ

ಆಯ್ಕೆ ವಿಧಾನ : ಅಭ್ಯರ್ಥಿಗಳು ಪದವಿ ಎಲ್ಲಾ ಸೆಮಿಸ್ಟರ್/ ವರ್ಷಗಳವಾರು ಪರೀಕ್ಷೆಯಲ್ಲಿ ಪಡೆದ ನಿಗದಿತ ಅಂಕಗಳ ಪ್ರತಿಶತ ಆಧಾರದ ಮೇಲೆ ಅರ್ಹತೆ ಇರುವ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡ 85 ಕ್ಕಿಳಿಸಿ ಪ್ರಾಪ್ತವಾಗುವ ಅಂಕಗಳ ಶೇಕಡಾವಾರು ಪ್ರಮಾಣದ ಜೊತೆಗೆ ಸಂದರ್ಶನದಲ್ಲಿ ಪ್ರಾಪ್ತವಾಗುವ ಅಂಕಗಳನ್ನು ಕೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುವುದು.

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1180 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು ರೂ. 590 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ಅಧಿಸೂಚನೆಯಲ್ಲಿ ನೀಡಿದ ಬ್ಯಾಂಕಿನ ಖಾತೆಗೆ ನೆಪ್ಟ್ (NEFT) ಮೂಲಕ ಜಮಾ ನೀಡಿ UTR ನಂಬರ್ ನ್ನು ಆನ್ಲೈನ್ ಅಪ್ಲಿಕೇಶನ್ ಪಾರ್ಮ್ ನಲ್ಲಿ ನಮೂದಿಸಿ ಚಲನ್ ಪ್ರತಿ ಅಪ್ಲೋಡ್ ಮಾಡತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 06, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2022

KCC Bank Dharwad Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment