KCDCC Bank Recruitment 2023 – Kolar Chikkballapur DCC Bank Recruitment 2023 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KCDCC Bank Recruitment 2023 : Details of Vacancies
ಹುದ್ದೆ : ಲೆಕ್ಕಿಗರು, ಹಿರಿಯ ಸಹಾಯಕರು, ವಾಹನ ಚಾಲಕರು, ಜವಾನರು, ಹಿರಿಯ ಸಹಾಯಕರು (ಬ್ಯಾಕ್ ಲಾಗ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕೋಲಾರದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 36 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಲೆಕ್ಕಿಗರು | 9 | 36000-67550 |
ಹಿರಿಯ ಸಹಾಯಕರು | 13 | 33450-62600 |
ವಾಹನ ಚಾಲಕರು | 3 | 27650-52650 |
ಜವಾನರು | 10 | 23500-47650 |
ಹಿರಿಯ ಸಹಾಯಕರು (ಬ್ಯಾಕ್ ಲಾಗ್) | 1 | 33450-62600 |
ಶೈಕ್ಷಣಿಕ ಅರ್ಹತೆ :
• ಲೆಕ್ಕಿಗರು & ಹಿರಿಯ ಸಹಾಯಕರು – ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನದ ಜೊತೆಗೆ ಟ್ಯಾಲಿ ಕೋರ್ಸ್ ತೇರ್ಗಡೆ ಪತ್ರ ಹೊಂದಿರಬೇಕು.
• ವಾಹನ ಚಾಲಕರು – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಲಘು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು.
• ಜವಾನರು – ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ :
• ಲೆಕ್ಕಿಗರು & ಹಿರಿಯ ಸಹಾಯಕರು – ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುವುದು.
• ವಾಹನ ಚಾಲಕರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತಾ ಆಧಾರದ ಮೇಲೆ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆಗೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ವಾಹನ ಚಾಲನಾ ಪರೀಕ್ಷೆಗೆ ಕರೆಯಲಾಗುವುದು. ನಂತರ ಮೌಖಿಕ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
• ಜವಾನರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತಾ ಆಧಾರದ ಮೇಲೆ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆಗೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಇತರೆ ವರ್ಗದ ಅಭ್ಯರ್ಥಿಗಳು – ರೂ. 1000
• ಪ.ಜಾತಿ, ಪ.ಪಂ., ಪ್ರ1, ಅಂಗವಿಕಲ, ಮಾ.ಸೈನಿಕ, ವಿಧವೆ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 02, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 16, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 16, 2023
KCDCC Bank Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Good