KDCC Bank Recruitment 2022 –  Apply for 41 Junior Clerk Posts

KDCC Bank Recruitment 2022 : ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KDCC Bank Recruitment 2022 : Details of Vacancies

ಹುದ್ದೆ : ಕಿರಿಯ ಗುಮಾಸ್ತರು/ ಕಿರಿಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೀಸಲಾತಿ ಹುದ್ದೆಗಳ ಸಂಖ್ಯೆ
ಸಾಮಾನ್ಯ ಅರ್ಹತೆ 20
ಪರಿಶಿಷ್ಟ ಜಾತಿ 06
ಪರಿಶಿಷ್ಟ ಪಂಗಡ 02
ಪ್ರವರ್ಗ 101
ಪ್ರವರ್ಗ 2ಎ06
ಪ್ರವರ್ಗ 2ಬಿ01
ಪ್ರವರ್ಗ 3ಎ03
ಪ್ರವರ್ಗ 3ಬಿ02

ಶೈಕ್ಷಣಿಕ ಅರ್ಹತೆ : ಭಾರತದ ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಪದವಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 – ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗದಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೆಡಿಸಿಸಿ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಡಿಸಿಸಿ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ, ರೂ. 59 ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಸ್ವ-ಹಸ್ತಾಕ್ಷರದಿಂದ ಭರ್ತಿ ಮಾಡಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಲಕೋಟೆಯ ಮೇಲೆ “ಕಿರಿಯ ಗುಮಾಸ್ತ/ಕಿರಿಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ” ಅಂತಾ ಸ್ಪಷ್ಟವಾಗಿ ನಮೂದಿಸಿ ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು ರೂ. 295, ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ. 590 ಅನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,
ಪ್ರಧಾನ ಕಛೇರಿ, ಹೊಸ ಮಾರುಕಟ್ಟೆ, ಶಿರಸಿ – 581 402 (ಉ.ಕ)

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಬ್ಯಾಂಕಿನಿಂದ ಅರ್ಜಿ ಫಾರ್ಮ್ ಪಡೆಯಲು ಕೊನೆಯ ದಿನಾಂಕ : ಸೆಪ್ಟೆಂಬರ್ 08, 2022 ಅಕ್ಟೋಬರ್ 20, 2022
ಭರ್ತಿ ಮಾಡಿದ ಅರ್ಜಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2022 ಅಕ್ಟೋಬರ್ 27, 2022

KDCC Bank Recruitment 2022 : Important Links

ಪ್ರಕಟಣೆClick Here
ತಿದ್ದುಪಡಿ ಪ್ರಕಟಣೆ Click Here
Official Notification Click Here
Websitewww.kanaradccbank.com

ವಿ.ಸೂ : ಬ್ಯಾಂಕು ಪೂರೈಸುವ ಅರ್ಜಿ ನಮೂನೆಯನ್ನು ಮಾತ್ರ ಉಪಯೋಗಿಸತಕ್ಕದ್ದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment