ಕೆಇಎ ಬಿಎಂಟಿಸಿ ಕಂಡಕ್ಟರ್ ನೇಮಕಾತಿ 2024 – KEA BMTC Conductor Recruitment 2024

KEA BMTC Conductor Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA BMTC Conductor Recruitment 2024 : Details of Vacancies

ಹುದ್ದೆ : ನಿರ್ವಾಹಕ (ಕಂಡಕ್ಟರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಮಿಕ್ಕುಳಿದ ವೃಂದ 2286
ಸ್ಥಳೀಯ ವೃಂದ 214

ಶೈಕ್ಷಣಿಕ ಅರ್ಹತೆ : ಪಿಯುಸಿ (ಆರ್ಟ್ಸ್/ಕಾಮರ್ಸ್/ಸೈನ್ಸ್) ಅಥವಾ 10+2 ICSE/ CBSE ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು ಜೊತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.

ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,660 – ರೂ. 25,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಆಫ್ ಲೈನ್-ಓಎಂಆರ್ ಮಾದರಿ ಮೂಲಕ ನಡೆಸಲಾಗುವುದು. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Common Aptitude Test) ನಲ್ಲಿ ಗಳಿಸಿದ ಅಂಕಗಳಲ್ಲಿ ಶೇಕಡ 75 ರಷ್ಟು ಅಂಕಗಳನ್ನು ಹಾಗೂ ಸದರಿ ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳಲ್ಲಿ ಶೇಕಡ 25 ರಷ್ಟು ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮೂಲ ದಾಖಲಾತಿಗಳ ಪರಿಶೀಲನೆ ಹಾಗೂ ದೇಹದಾರ್ಡ್ಯತೆ ಪರಿಶೀಲನೆಗೆ ಕರೆಯಲಾಗುವುದು.

ಕೆಇಎ ಬಿಎಂಟಿಸಿ ಕಂಡಕ್ಟರ್ ನೇಮಕಾತಿ 2024 – KEA BMTC Conductor Recruitment 2024

ದೇಹದಾರ್ಢ್ಯತೆ :
• ಪುರುಷ ಅಭ್ಯರ್ಥಿಗಳ ಎತ್ತರ – 160 ಸೆಂ.ಮೀ.
• ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆಂ.ಮೀ.

ಪರೀಕ್ಷಾ ಕೇಂದ್ರಗಳು : ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರದಲ್ಲಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಿಡಿಓ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 10, 2024 ಏಪ್ರಿಲ್ 19, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2024 ಮೇ 18, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 13, 2024 ಮೇ 19, 2024

KEA BMTC Recruitment 2024 : Important Links

NEW NOTIFICATION (RPC)CLICK HERE
NEW NOTIFICATION (HK)CLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment