
KEA Group B Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Group B Recruitment 2026 : Details of Vacancies
ಹುದ್ದೆ :
ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರು (ಗ್ರೂಪ್-ಬಿ)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 320 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 268 |
| ಕಲ್ಯಾಣ ಕರ್ನಾಟಕ ವೃಂದ | 52 |
ಶೈಕ್ಷಣಿಕ ಅರ್ಹತೆ :
ಎಲ್.ಎಲ್.ಬಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ವಕೀಲರ ಕಾಯ್ದೆ 1961 ರಂತೆ ಭಾರತದಲ್ಲಿನ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಗಳಲ್ಲಿ ವಕೀಲ ವೃತ್ತಿಯಲ್ಲಿ ನಿರತರಾಗಿದ್ದು, ಕನಿಷ್ಠ 3 ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಹುದ್ದೆಗಳ ನೇಮಕಾತಿ 2026
ವಯೋಮಿತಿ (15/12/2026ಕ್ಕೆ) :
- ಕನಿಷ್ಠ 25 ವರ್ಷ ಪೂರೈಸಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 42 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 47 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 ರಿಂದ ರೂ. 1,34,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಪ್ರಾಥಮಿಕ ಪರೀಕ್ಷೆ (ಪ್ರಾಥಮಿಕ ಪರೀಕ್ಷೆಯ ಪ್ರಶ್ನೆಗಳು ಬಹು ಆಯ್ಕೆಯ ಪ್ರಕಾರದಾಗಿರುತ್ತದೆ)
- ಮುಖ್ಯ ಪರೀಕ್ಷೆ (ಮುಖ್ಯ ಪರೀಕ್ಷೆಯ ಪ್ರಶ್ನೆಗಳು ಪ್ರಭಂದ ಮಾದರಿಯಾಗಿದ್ದು, ಉತ್ತರಗಳನ್ನು ಲಿಖಿತವಾಗಿ ಬರೆಯಬೇಕು)
- ಸಂದರ್ಶನ
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗಸ್ತು ಅರಣ್ಯ ಪಾಲಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳು – ರೂ. 500
- ವಿಶೇಷ ಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 15, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 16, 2026
KEA Group B Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.