KEA KLA Recruitment 2024 : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA ಈಗಾಗಲೇ ಹೊರಡಿಸಿರುವ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ. ಹೀಗಾಗಿ ವಯೋಮಿತಿ ಸಡಿಲಿಕೆ ಅನ್ವಯಿಸುವಂತಹ ಅಭ್ಯರ್ಥಿಗಳು ಹಾಗೂ ಈ ಹಿಂದೆ ಇತರೆ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಸಲು ಮತ್ತೋಮ್ಮೆ ಕಾಲಾವಕಾಶ ನೀಡಲಾಗಿದೆ.
KEA KLA Recruitment 2024 : Details of Vacancies
ಹುದ್ದೆ : ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್, ಕಂಪ್ಯೂಟರ್ ಆಪರೇಟರ್, ಸಹಾಯಕರು, ಕಿರಿಯ ಸಹಾಯಕರು, ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 28 27 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸೀನಿಯರ್ ಪ್ರೋಗ್ರಾಮರ್ | 2 | 52650-97100 |
ಜೂನಿಯರ್ ಪ್ರೋಗ್ರಾಮರ್ | 2 | 43100-83900 |
ಜೂನಿಯರ್ ಕನ್ಸೋಲ್ ಆಪರೇಟರ್ | 4 | 37900-70850 |
ಕಂಪ್ಯೂಟರ್ ಆಪರೇಟರ್ | 4 | 30350-58250 |
ಸಹಾಯಕರು | 3 | 30350-58250 |
ಕಿರಿಯ ಸಹಾಯಕರು | 21400-42000 | |
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು | 5 | 21400-42000 |
ಶೈಕ್ಷಣಿಕ ಅರ್ಹತೆ :
ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ – ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
ಕಂಪ್ಯೂಟರ್ ಆಪರೇಟರ್ – ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು.
ಸಹಾಯಕರು – ಕಾನೂನು ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.
ಕಿರಿಯ ಸಹಾಯಕರು – ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಬ್ಯಾಂಕಿನಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿ 2024
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ 41 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ 43 ವರ್ಷ
ಅನುಭವ : ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
• ವಿಕಲಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 24, 2024 ಡಿಸೆಂಬರ್ 04, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 23, 2024 ಜನವರಿ 03, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2024 ಜನವರಿ 04, 2025
KEA KLA Recruitment 2024 : Important Links
DATE EXTEND NOTIFICATION | CLICK HERE |
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.