
KEA KREIS Recruitment 2026 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಲ್ಲಿ (ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾಗಾಂಧಿ/ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು) ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA KREIS Recruitment 2026 : Details of Vacancies
ಹುದ್ದೆ :
ಕನ್ನಡ ಭಾಷಾ ಶಿಕ್ಷಕರು, ಆಂಗ್ಲ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಿತ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಗಣಕಯಂತ್ರ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಪದವೀಧರ ಚಿತ್ರಕಲಾ ಶಿಕ್ಷಕರು, ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1087 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಉಳಿಕೆ ಮೂಲ ವೃಂದ (RPC) | ಸ್ಥಳೀಯ ವೃಂದ (KK) |
| ಕನ್ನಡ ಭಾಷಾ ಶಿಕ್ಷಕರು | 103 | 62 |
| ಆಂಗ್ಲ ಭಾಷಾ ಶಿಕ್ಷಕರು | 108 | 69 |
| ಹಿಂದಿ ಭಾಷಾ ಶಿಕ್ಷಕರು | 55 | 31 |
| ಗಣಿತ ಶಿಕ್ಷಕರು | 103 | 35 |
| ವಿಜ್ಞಾನ ಶಿಕ್ಷಕರು | 106 | 32 |
| ಸಮಾಜ ವಿಜ್ಞಾನ ಶಿಕ್ಷಕರು | 154 | 24 |
| ಗಣಕಯಂತ್ರ ಶಿಕ್ಷಕರು | 57 | – |
| ದೈಹಿಕ ಶಿಕ್ಷಣ ಶಿಕ್ಷಕರು | 81 | 33 |
| ಪದವೀಧರ ಚಿತ್ರಕಲಾ ಶಿಕ್ಷಕರು | – | 17 |
| ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು | – | 17 |
ಶೈಕ್ಷಣಿಕ ಅರ್ಹತೆ :
ಆಯಾ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕ ಪದವಿ ಮತ್ತು ಬಿ.ಇಡ್ ಪದವಿ ಪಡೆದಿರಬೇಕು.
ಇತರೆ ಅರ್ಹತೆಗಳು :
- ಕನ್ನಡ ಭಾಷಾ ಶಿಕ್ಷಕರು, ಆಂಗ್ಲ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಿತ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ TET (ಪತ್ರಿಕೆ-2) ಅಥವಾ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ನಡೆಸುವ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET)ಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ವಸತಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ನಡೆಯುತ್ತಿರುವುದರಿಂದ ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರಬೇಕು.
ಉದ್ಯೋಗ ಮಾಹಿತಿ : ಕೆಇಎ ಇಂದ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 48 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 50 ವರ್ಷ
ವೇತನ :
| ಹುದ್ದೆ | ವೇತನ |
| ಕನ್ನಡ ಭಾಷಾ ಶಿಕ್ಷಕರು, ಆಂಗ್ಲ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಿತ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಗಣಕಯಂತ್ರ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು | ರೂ. 54,175 – ರೂ. 99,400 |
| ಪದವೀಧರ ಚಿತ್ರಕಲಾ ಶಿಕ್ಷಕರು, ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು | ರೂ. 49,050 – ರೂ. 92,500 |
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು)
ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
• ವಿಶೇಷಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 13, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 14, 2026
KREIS Teacher Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE ಜುಲೈ 15 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.