
KEA KSFES Karnataka Recruitment 2026 – Karnataka State Fire Department Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA KSFES Karnataka Recruitment 2026 : Details of Vacancies
ಹುದ್ದೆ :
ಅಗ್ನಿಶಾಮಕ ಠಾಣಾಧಿಕಾರಿ (Fire Station Officer), ಅಗ್ನಿಶಾಮಕ (Fire Fighter)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 476ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಉಳಿಕೆ ಮೂಲ ವೃಂದ |
| ಅಗ್ನಿಶಾಮಕ ಠಾಣಾಧಿಕಾರಿ | 16 |
| ಅಗ್ನಿಶಾಮಕ | 460 |
ಶೈಕ್ಷಣಿಕ ಅರ್ಹತೆ :
ಅಗ್ನಿಶಾಮಕ ಠಾಣಾಧಿಕಾರಿ –
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರ ವಿಷಯದೊಂದಿಗೆ ವಿಜ್ಞಾನ ಪದವಿ ತೇರ್ಗಡೆ ಹೊಂದಿರಬೇಕು.
ಅಗ್ನಿಶಾಮಕ –
ಕನ್ನಡ ಭಾಷಾ ವಿಷಯದೊಂದಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗಸ್ತು ಅರಣ್ಯ ಪಾಲಕ ಹುದ್ದೆಗಳ ನೇಮಕಾತಿ 2026
ವಯೋಮಿತಿ (22/12/2026ಕ್ಕೆ) :
- ಅಗ್ನಿಶಾಮಕ ಠಾಣಾಧಿಕಾರಿ – ಕನಿಷ್ಠ 21 ವರ್ಷ
- ಅಗ್ನಿಶಾಮಕ – ಕನಿಷ್ಠ 18 ವರ್ಷ
- ಅಗ್ನಿಶಾಮಕ ಠಾಣಾಧಿಕಾರಿ & ಅಗ್ನಿಶಾಮಕ – ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ
- ಅಗ್ನಿಶಾಮಕ ಠಾಣಾಧಿಕಾರಿ & ಅಗ್ನಿಶಾಮಕ – ಎಸ್ಸಿ, ಎಸ್ಟಿ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ
ವೇತನ :
| ಹುದ್ದೆ | ವೇತನ |
| ಅಗ್ನಿಶಾಮಕ ಠಾಣಾಧಿಕಾರಿ | ರೂ. 54,175 – ರೂ. 99,400 |
| ಅಗ್ನಿಶಾಮಕ | ರೂ. 37,500 – ರೂ. 76,100 |
ಆಯ್ಕೆ ವಿಧಾನ :
- ಅಗ್ನಿಶಾಮಕ ಠಾಣಾಧಿಕಾರಿ – ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ, ಈ ಪರೀಕ್ಷೆಗಳಲ್ಲಿ ಅರ್ಹರಾಗುವ ಅಭ್ಯರ್ಥಿಗಳಿಗೆ ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
- ಅಗ್ನಿಶಾಮಕ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇರೆಗೆ 1:5ರ ಅನುಪಾತದಲ್ಲಿ ದೇಹದಾರ್ಢ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಪ್ರಾಧಿಕಾರವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಅಗ್ನಿಶಾಮಕ ಠಾಣಾಧಿಕಾರಿ –
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ಅಗ್ನಿಶಾಮಕ –
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 500
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 300
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 23, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 22, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 23, 2026
KEA Karnataka State Fire Department Recruitment 2026 : Important Links
| NOTIFICATION (FIRE STATION OFFICER) RPC | CLICK HERE |
| NOTIFICATION (FIRE FIGHTER) RPC | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.