KEA KUWSDB Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA KUWSDB Recruitment 2024 : Details of Vacancies
ಹುದ್ದೆ : ಸಹಾಯಕ ಇಂಜಿನಿಯರ್ (ಸಿವಿಲ್), ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 64 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ಇಂಜಿನಿಯರ್ (ಸಿವಿಲ್) | 50 | 43100-83900 |
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) | 14 | 27650-52650 |
ಶೈಕ್ಷಣಿಕ ಅರ್ಹತೆ :
• ಸಹಾಯಕ ಇಂಜಿನಿಯರ್ (ಸಿವಿಲ್) : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿಇ/ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು.
• ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2024
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು : ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ, ತುಮಕೂರು ಕೇಂದ್ರದಲ್ಲಿ ನಡೆಸಲಾಗುವುದು.
ಉದ್ಯೋಗ ಮಾಹಿತಿ : ಕೆಇಎ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 10, 2024 ಮಾರ್ಚ್ 21, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 14, 2024 ಮಾರ್ಚ್ 22, 2024
KEA Recruitment 2024 : Important Links
LAST DATE EXTENDED | CLICK HERE |
NOTIFICATION | CLICK HERE |
ಹುದ್ದೆಗಳ ವರ್ಗೀಕರಣ | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.