
KEA Land Surveyor Recruitment 2026 : ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Land Surveyor Recruitment 2026 : Details of Vacancies
ಹುದ್ದೆ :
ಭೂಮಾಪಕರು (ಗ್ರೂಪ್ ‘ಸಿ’)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 750 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 560 |
| ಕಲ್ಯಾಣ ಕರ್ನಾಟಕ ವೃಂದ | 190 |
ಶೈಕ್ಷಣಿಕ ಅರ್ಹತೆ :
- ಕಾನೂನಿನಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ನಲ್ಲಿ ಅಥವಾ ತಂತ್ರಜ್ಞಾನದಲ್ಲಿ ಯಾವುದೇ ಪದವಿ ಹೊಂದಿರಬೇಕು ಅಥವಾ ಯಾವುದೇ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಎ.ಎಂ.ಐ.ಇ. ಪದವಿ ಹೊಂದಿರಬೇಕು. ಅಥವಾ
- ಕಾನೂನಿನಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಗಣಿತ/ ಭೌತಶಾಸ್ತ್ರ/ ಕಂಪ್ಯೂಟರ್ ಸೈನ್ಸ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ ಬಿ.ಎಸ್.ಸಿ ಪದವಿ ಪಡೆದಿರತಕ್ಕದ್ದು. ಅಥವಾ
- ಎ.ಐ.ಸಿ.ಟಿ.ಇ ಮಾನ್ಯತೆ ಪಡೆದ ಅಧಿಕೃತ ಸಂಸ್ಥೆಯಿಂದ ಇಂಜಿನಿಯರಿಂಗ್/ ತಂತ್ರಜ್ಞಾನದ ಯಾವುದೇ ವಿಭಾಗದಲ್ಲಿ ಡಿಪ್ಲೊಮಾ ಪಡೆದಿರತಕ್ಕದ್ದು.
ಉದ್ಯೋಗ ಮಾಹಿತಿ : ಕೆಇಎ ಇಂದ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು)
ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
• ವಿಶೇಷಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 11, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 07, 2026 ಆಗಸ್ಟ್ 20, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 10, 2026 ಆಗಸ್ಟ್ 21, 2026
KEA Land Surveyor Recruitment 2026 : Important Links
| DATE EXTEND NOTIFICATION | CLICK HERE |
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.