ಕೆಇಎಯಿಂದ ನರ್ಸಿಂಗ್ ಮತ್ತು ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ 2026 – KEA Nursing And Pharmacy Officer Recruitment 2026

KEA Nursing And Pharmacy Officer Recruitment 2026

KEA Nursing And Pharmacy Officer Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ಗ್ರೂಪ್ -ಸಿ ವೃಂದದ ನರ್ಸಿಂಗ್ ಆಫೀಸರ್ ಮತ್ತು ಫಾರ್ಮಸಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Nursing And Pharmacy Officer Recruitment 2026 : Details of Vacancies

ಹುದ್ದೆ :

ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ), ಫಾರ್ಮಸಿ ಆಫೀಸರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 233 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಉಳಿಕೆ ಮೂಲ ವೃಂದ ಕಲ್ಯಾಣ ಕರ್ನಾಟಕ ವೃಂದ
ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ)9034
ಫಾರ್ಮಸಿ ಆಫೀಸರ್ 9811

ಶೈಕ್ಷಣಿಕ ವಿದ್ಯಾರ್ಹತೆ :

ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) –

ಡಿಪ್ಲೊಮಾ ಇನ್ ಜನರಲ್ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು.

ಫಾರ್ಮಸಿ ಆಫೀಸರ್ –

ಡಿಪ್ಲೊಮಾ ಇನ್ ಫಾರ್ಮಸಿ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) –

ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಪಿಯುಸಿ/ ತತ್ಸಮಾನ ವಿದ್ಯಾರ್ಹತೆ ಮತ್ತು ಜನರಲ್ ನರ್ಸಿಂಗ್ ಮತ್ತು Midwifery (GNM) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ)ರೂ. 54,175 – ರೂ. 99,400
ಫಾರ್ಮಸಿ ಆಫೀಸರ್ ರೂ. 44,425 – ರೂ. 83,700

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್‌ಲೈನ್‌ ಸಿಬಿಟಿ ಅಥವಾ ಆಫ್‌ಲೈನ್‌-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು)

ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಪತ್ರಿಕೆ/ವಿಷಯಒಟ್ಟು ಪ್ರಶ್ನೆಗಳು ಗರಿಷ್ಠ ಅಂಕಗಳು ಅವಧಿ
ಪತ್ರಿಕೆ-1
ಸಾಮಾನ್ಯ ಜ್ಞಾನ
1001002 ಗಂಟೆ
ಪತ್ರಿಕೆ-2
ನಿರ್ದಿಷ್ಟ ಪತ್ರಿಕೆ
1001002 ಗಂಟೆ

ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಿಂದ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
• ವಿಶೇಷಚೇತನ ಅಭ್ಯರ್ಥಿಗಳು – ರೂ. 250

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 07, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026

KEA Nursing And Pharmacy Officer Recruitment 2026 : Important Links

NOTIFICATION (RPC)CLICK HERE
NOTIFICATION (KK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment