
KEA Prisons Department Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ಜೈಲರ್, ವಾರ್ಡರ್ (ವೀಕ್ಷಕರು), ದ್ವಿತೀಯ ದರ್ಜೆ ಬೋಧಕರು, ವಾರ್ಡರ್ ಕಮ್ ನರ್ಸಿಂಗ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Prisons Department Recruitment 2026 : Details of Vacancies
ಹುದ್ದೆ :
ಜೈಲರ್, ವಾರ್ಡರ್ (ವೀಕ್ಷಕರು), ದ್ವಿತೀಯ ದರ್ಜೆ ಬೋಧಕರು, ವಾರ್ಡರ್ ಕಮ್ ನರ್ಸಿಂಗ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 869 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಉಳಿದ ಮೂಲ ವೃಂದ | ಕಲ್ಯಾಣ ಕರ್ನಾಟಕ ವೃಂದ |
| ಜೈಲರ್ | – | 05 |
| ವಾರ್ಡರ್ (ವೀಕ್ಷಕರು) | 560 | 275 |
| ದ್ವಿತೀಯ ದರ್ಜೆ ಬೋಧಕರು | 16 | 8 |
| ವಾರ್ಡರ್ ಕಮ್ ನರ್ಸಿಂಗ್ | – | 5 |
ಶೈಕ್ಷಣಿಕ ವಿದ್ಯಾರ್ಹತೆ :
ಜೈಲರ್ –
ಅಭ್ಯರ್ಥಿಯು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಸೋಷಿಯಾಲಜಿ, ಸೈಕಾಲಜಿ, ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್ ವಿಷಯಗಳಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು)
ವಾರ್ಡರ್ (ವೀಕ್ಷಕರು) –
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
ದ್ವಿತೀಯ ದರ್ಜೆ ಬೋಧಕರು –
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಕಾರ್ಪೆಂಟ್ರಿ/ ಟೈಲರಿಂಗ್/ ಟೆಕ್ಸಟೈಲ್/ವೀವಿಂಗ್/ ಕಾರ್ಪೆಟ್ ಮೇಕಿಂಗ್ ಮುಂತಾದ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಪ್ರಮಾಣಪತ್ರ ಹೊಂದಿರಬೇಕು.
ವಾರ್ಡರ್ ಕಮ್ ನರ್ಸಿಂಗ್ –
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಪ್ರಥಮ ಚಿಕಿತ್ಸೆಯಲ್ಲಿ (First Aid) ಪ್ರಮಾಣಪತ್ರ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೆಇಎಯಿಂದ ಪೌರಾಡಳಿತ ನಿರ್ದೇಶನಾಲಯ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರು ಸರಬರಾಜು ಆಪರೇಟರ್ ಹಾಗೂ ಇಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (15/10/2026ಕ್ಕೆ) :
- ಕನಿಷ್ಠ 20 ವರ್ಷ ಪೂರೈಸಿರಬೇಕು
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 31 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ
ವೇತನ :
| ಹುದ್ದೆ | ವೇತನ |
| ಜೈಲರ್ | ರೂ. 61,300 – ರೂ. 1,12,900 |
| ವಾರ್ಡರ್ (ವೀಕ್ಷಕರು) | ರೂ. 37,500 – ರೂ. 76,100 |
| ದ್ವಿತೀಯ ದರ್ಜೆ ಬೋಧಕರು | ರೂ. 37,500 – ರೂ. 76,100 |
| ವಾರ್ಡರ್ ಕಮ್ ನರ್ಸಿಂಗ್ | ರೂ. 34,100 – ರೂ. 67,600 |
ಆಯ್ಕೆ ವಿಧಾನ :
- ಸ್ಪರ್ಧಾತ್ಮಕ ಪರೀಕ್ಷೆ (ಆಫ್ಲೈನ್-ಒಎಂಆರ್ ಮಾದರಿ)
- ದೇಹದಾರ್ಢ್ಯತೆ ಪರೀಕ್ಷೆ (PST)
- ಸಹಿಷ್ಣುತೆ ಪರೀಕ್ಷೆ (PET)
- ವೈದ್ಯಕೀಯ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –
ಜೈಲರ್ ಹುದ್ದೆಗಳಿಗೆ
| ವಿಷಯ | ಒಟ್ಟು ಪ್ರಶ್ನೆಗಳು | ಒಟ್ಟು ಅಂಕಗಳು | ಅವಧಿ |
| ಪದವಿ ಮಟ್ಟದ ಬಹು ಆಯ್ಕೆ ಪ್ರಶ್ನೆಗಳುಳ್ಳ – ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ ಮತ್ತು ಮಾನಸಿಕ ಸಾಮರ್ಥ್ಯ | 100 | 100 | 90 ನಿಮಿಷಗಳು |
ಉಳಿದ ಹುದ್ದೆಗಳಿಗೆ (ಜೈಲರ್ ಹುದ್ದೆ ಹೊರತುಪಡಿಸಿ)
| ವಿಷಯ | ಒಟ್ಟು ಪ್ರಶ್ನೆಗಳು | ಒಟ್ಟು ಅಂಕಗಳು | ಅವಧಿ |
| ಪದವಿ ದರ್ಜೆಗಿಂತ ಕಡಿಮೆ ಮಟ್ಟದ ಬಹು ಆಯ್ಕೆ ಪ್ರಶ್ನೆಗಳುಳ್ಳ – ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ ಮತ್ತು ಮಾನಸಿಕ ಸಾಮರ್ಥ್ಯ | 100 | 100 | 90 ನಿಮಿಷಗಳು |
ಉದ್ಯೋಗ ಮಾಹಿತಿ : ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 19, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 15, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 16, 2026
KEA Prisons Department Recruitment 2026 : Important Links
| NOTIFICATION (RPC) | CLICK HERE |
| NOTIFICATION (HK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.