
KEA PU Lecturers Recruitment 2026 : ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ಗ್ರೂಪ್-ಬಿ ವೃಂದದ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA PU Lecturers Recruitment 2026 : Details of Vacancies
ಹುದ್ದೆ :
ಉಪನ್ಯಾಸಕರು (ಕನ್ನಡ ಉಪನ್ಯಾಸಕರು, ಇಂಗ್ಲೀಷ್ ಉಪನ್ಯಾಸಕರು, ಇತಿಹಾಸ ಉಪನ್ಯಾಸಕರು, ಅರ್ಥಶಾಸ್ತ್ರ ಉಪನ್ಯಾಸಕರು, ರಾಜ್ಯಶಾಸ್ತ್ರ ಉಪನ್ಯಾಸಕರು, ಸಮಾಜಶಾಸ್ತ್ರ ಉಪನ್ಯಾಸಕರು, ಭೂಗೋಳಶಾಸ್ತ್ರ ಉಪನ್ಯಾಸಕರು, ವಾಣಿಜ್ಯಶಾಸ್ತ್ರ ಉಪನ್ಯಾಸಕರು, ಭೌತಶಾಸ್ತ್ರ ಉಪನ್ಯಾಸಕರು, ರಸಾಯನಶಾಸ್ತ್ರ ಉಪನ್ಯಾಸಕರು, ಗಣಿತಶಾಸ್ತ್ರ ಉಪನ್ಯಾಸಕರು, ಜೀವಶಾಸ್ತ್ರ ಉಪನ್ಯಾಸಕರು, ಗಣಕ ವಿಜ್ಞಾನ ಉಪನ್ಯಾಸಕರು)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 814 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 778 |
| ಕಲ್ಯಾಣ ಕರ್ನಾಟಕ ವೃಂದ | 36 |
ಶೈಕ್ಷಣಿಕ ವಿದ್ಯಾರ್ಹತೆ :
ಹುದ್ದೆಗೆ ನಿಗದಿಪಡಿಸಿದ ವಿಷಯಗಳಲ್ಲಿ ಕನಿಷ್ಠ ಶೇಕಡಾ 55 ರಷ್ಟು ಅಂಕಗಳೊಂದಿಗೆ ದ್ವಿತೀಯ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಪರಂತು, ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ವಿಷಯಗಳಲ್ಲಿ ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2026
ವಯೋಮಿತಿ (25/12/2026ಕ್ಕೆ) :
- ಕನಿಷ್ಠ 21 ವರ್ಷ ಪೂರೈಸಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 ರಿಂದ ರೂ. 1,34,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಶ್ನೆ ಪತ್ರಿಕೆ ಹಾಗೂ ಪಠ್ಯಕ್ರಮ –
| ಪತ್ರಿಕೆ | ವಿಷಯ | ಒಟ್ಟು ಪ್ರಶ್ನೆಗಳು | ಅವಧಿ |
| ಕನ್ನಡ ಭಾಷಾ ಪರೀಕ್ಷೆ | 1) ವಿಷಯದ ಸಮಗ್ರ ಅರ್ಥೈಸುವಿಕೆ. 2) ಪದ ಪ್ರಯೋಗ. 3) ವಿಷಯ ಸಂಕ್ಷೇಪಣೆ. 4) ಪದ ಜ್ಞಾನ. 5) ಇಂಗ್ಲೀಷ್ ನಿಂದ ಕನ್ನಡಕ್ಕೆ ಭಾಷಾಂತರ | 150 | 3 ಗಂಟೆ |
| ನಿರ್ದಿಷ್ಟ ಪತ್ರಿಕೆ | ಪತ್ರಿಕೆ-1 | 150 | 3 ಗಂಟೆ |
| ನಿರ್ದಿಷ್ಟ ಪತ್ರಿಕೆ | ಪತ್ರಿಕೆ-2 | 150 | 3 ಗಂಟೆ |
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
- ವಿಶೇಷಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 26, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 25, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 26, 2026
KEA PU Lecturers Recruitment 2026 : Important Links
| NOTIFICATION – RPC | CLICK HERE |
| NOTIFICATION – KK | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.