ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 – KEA Recruitment 2025

KEA Recruitment 2025 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ವಿವಿಧ ಇಲಾಖೆಗಳ/ ನಿಗಮ/ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಂಸ್ಥೆಯ ಹೆಸರು, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Recruitment 2025 : Details of Vacancies

ಸಂಸ್ಥೆಯ ಹೆಸರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ

ಹುದ್ದೆ : ಸಹಾಯಕ, ಗ್ರಂಥಪಾಲಕ, ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕ.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ, ಇಂಜಿನಿಯರಿಂಗ್ ಪದವಿ, ಲೈಬ್ರರಿ ಸೈನ್ಸ್ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸಂಸ್ಥೆಯ ಹೆಸರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆ : ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ, ಸಹಾಯಕ ಸಂಚಾರ ವ್ಯವಸ್ಥಾಪಕ, ಸಹಾಯಕ ಸಂಚಾರ ನಿರೀಕ್ಷಕ.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಕಾನೂನು ಪದವಿ, ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸಂಸ್ಥೆಯ ಹೆಸರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್.

ಹುದ್ದೆ : ಅಧಿಕಾರಿ (ಮಾರುಕಟ್ಟೆ), ಕಿರಿಯ ಅಧಿಕಾರಿ (ಮಾರುಕಟ್ಟೆ), ಅಸಿಸ್ಟೆಂಟ್ ಆಪರೇಟರ್, ಅಧಿಕಾರಿ (ಲೆಕ್ಕಪತ್ರ-ಮಾರುಕಟ್ಟೆ), ಕಿರಿಯ ಅಧಿಕಾರಿ (ಕ್ಯೂಎಡಿ), ಕಿರಿಯ ಅಧಿಕಾರಿ (ಆರ್ & ಡಿ), ಕಿರಿಯ ಅಧಿಕಾರಿ (ಉತ್ಪಾದನೆ & ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ/ ಉಗ್ರಾಣ), ಮಾರಾಟ ಪ್ರತಿನಿಧಿ, ಕಿರಿಯ ಮಾರಾಟ ಪ್ರತಿನಿಧಿ.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ, ಪದವಿ, ಬಿಇ, ಬಿ.ಟೆಕ್, ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸಂಸ್ಥೆಯ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆ : ಸಹಾಯಕ ಲೆಕ್ಕಿಗ, ನಿರ್ವಾಹಕ

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಹೊಂದಿರಬೇಕು.

ಸಂಸ್ಥೆಯ ಹೆಸರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಹುದ್ದೆ : ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಹೊಂದಿರಬೇಕು.

ಇಲಾಖೆ ಹೆಸರು : ಕೃಷಿ ಮಾರಾಟ ಇಲಾಖೆ

ಹುದ್ದೆ : ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು, ಮಾರುಕಟ್ಟೆ ಮೇಲ್ವಿಚಾರಕರು, ದ್ವಿತೀಯ ದರ್ಜೆ ಸಹಾಯಕರು, ಮಾರಾಟ ಸಹಾಯಕರು.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ, ಡಿಪ್ಲೊಮಾ ಹೊಂದಿರಬೇಕು.

ಇಲಾಖೆ ಹೆಸರು : ತಾಂತ್ರಿಕ ಶಿಕ್ಷಣ ಇಲಾಖೆ

ಹುದ್ದೆ : ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : KPSC ಇಂದ ಕೃಷಿ ಇಲಾಖೆಯಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2,882 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಇಲಾಖೆಹುದ್ದೆಗಳ ಸಂಖ್ಯೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ44
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ750
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್38
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ1752
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ25
ಕೃಷಿ ಮಾರಾಟ ಇಲಾಖೆ180
ತಾಂತ್ರಿಕ ಶಿಕ್ಷಣ ಇಲಾಖೆ93

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅಧಿಸೂಚನೆ ಪ್ರಕಟವಾದ ದಿನಾಂಕ : ಜನವರಿ 01, 2025
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಶೀಘ್ರದಲ್ಲೇ

KEA Upcoming Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಈ ಮೇಲ್ಕಂಡ ವಿವಿಧ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ನೇಮಕಾತಿಯ ಹುದ್ದೆಗಳಿಗೆ ವೇತನ ಶ್ರೇಣಿ, ಇಲಾಖೆವಾರು ವೃಂದವಾರು ವರ್ಗೀಕರಣ ಹಾಗೂ ಇತರೆ ಪರೀಕ್ಷಾ ಸಂಬಂಧ ಮಾಹಿತಿಗಳನ್ನು ಶೀಘ್ರದಲ್ಲೇ ವಿವರವಾದ ಅಧಿಸೂಚನೆ ಪ್ರಕಟವಾದ ನಂತರ ಅಪ್ಡೇಟ್ ಮಾಡಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment