
KEA Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮಾರಾಟ ಇಲಾಖೆ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Recruitment 2026 : Details of Vacancies
ಹುದ್ದೆ :
- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ – ಕೈಗಾರಿಕಾ ವಿಸ್ತರಣಾಧಿಕಾರಿ
- ರೇಷ್ಮೆ ಇಲಾಖೆ – ರೇಷ್ಮೆ ನಿರೀಕ್ಷಕರು
- ಕೃಷಿ ಮಾರಾಟ ಇಲಾಖೆ – ಮಾರುಕಟ್ಟೆ ಮೇಲ್ವಿಚಾರಕ
- ಕೈಮಗ್ಗ ಮತ್ತು ಜವಳಿ ಇಲಾಖೆ – ಜವಳಿ ತನಿಖಾಧಿಕಾರಿ
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 100 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಉಳಿಕೆ ಮೂಲ ವೃಂದ | ಕಲ್ಯಾಣ ಕರ್ನಾಟಕ ವೃಂದ |
| ಕೈಗಾರಿಕಾ ವಿಸ್ತರಣಾಧಿಕಾರಿ | 35 | – |
| ರೇಷ್ಮೆ ನಿರೀಕ್ಷಕರು | – | 34 |
| ಮಾರುಕಟ್ಟೆ ಮೇಲ್ವಿಚಾರಕ | – | 4 |
| ಜವಳಿ ತನಿಖಾಧಿಕಾರಿ | 22 | 5 |
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :
ಕೈಗಾರಿಕಾ ವಿಸ್ತರಣಾಧಿಕಾರಿ –
ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ (ಬಿ.ಇ) ಅಥವಾ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿ.ಟೆಕ್) ಅಥವಾ ವಿಜ್ಞಾನ ಪದವಿ ಅಥವಾ ವಾಣಿಜ್ಯ ಪದವಿ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಬಿಸಿನೆಸ್ ಮ್ಯಾನೇಜ್‌ಮೆಂಟ್ ಪದವಿಯನ್ನು ಹೊಂದಿರಬೇಕು.
ರೇಷ್ಮೆ ನಿರೀಕ್ಷಕರು –
ಸೆರಿಕಲ್ಚರ್ ಪದವಿ ಅಥವಾ ವಿಜ್ಞಾನ ಪದವಿಯೊಂದಿಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಸೆರಿಕಲ್ಚರ್ ಅರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಸಸ್ಯಶಾಸ್ತ್ರ ಅಥವಾ ಪ್ರಾಣಿಶಾಸ್ತ್ರ ಅಥವಾ ಸೆರಿಕಲ್ಚರ್ ಒಂದು ವಿಷಯವಾಗಿ ಹೊಂದಿರುವ ವಿಜ್ಞಾನ ಪದವಿ ಅಥವಾ ಕೃಷಿ ಅಥವಾ ತೋಟಗಾರಿಕೆ ಪದವಿ ಹೊಂದಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ಮಾರುಕಟ್ಟೆ ಮೇಲ್ವಿಚಾರಕ –
ಬಿ.ಎಸ್ಸಿ ಇನ್ ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಮತ್ತು ಕೋಆಪರೇಶನ್ ಅಥವಾ ಬಿ.ಎಸ್ಸಿ (ಆನರ್ಸ್) ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಮತ್ತು ಕೋಆಪರೇಶನ್ ಅಥವಾ ಬಿ.ಎಸ್ಸಿ (ಆನರ್ಸ್) ಅಗ್ರಿಕಲ್ಚರಲ್ ಬಿಸಿನೆಸ್ ಮ್ಯಾನೇಜ್ಮೆಂಟ್.
ಜವಳಿ ತನಿಖಾಧಿಕಾರಿ –
ಜವಳಿ ಅಥವಾ ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗಸ್ತು ಅರಣ್ಯ ಪಾಲಕ ಹುದ್ದೆಗಳ ನೇಮಕಾತಿ 2026
ವಯೋಮಿತಿ :
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
| ಹುದ್ದೆ | ವೇತನ |
| ಕೈಗಾರಿಕಾ ವಿಸ್ತರಣಾಧಿಕಾರಿ | ರೂ. 54,175 – ರೂ. 99,400 |
| ರೇಷ್ಮೆ ನಿರೀಕ್ಷಕರು | ರೂ. 44,425 – ರೂ. 83,700 |
| ಮಾರುಕಟ್ಟೆ ಮೇಲ್ವಿಚಾರಕ | ರೂ. 44,425 – ರೂ. 83,700 |
| ಜವಳಿ ತನಿಖಾಧಿಕಾರಿ | ರೂ. 54,175 – ರೂ. 99,400 |
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ನಾಲ್ಕನೇ ಒಂದು ಭಾಗದಷ್ಟು ಅಂಕಗಳನ್ನು ಕಡಿತಗೊಳಿಸಲಾಗುತ್ತದೆ)
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳು – ರೂ. 500
- ವಿಕಲಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 15, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 16, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 16, 2026 (ಕೈಮಗ್ಗ ಮತ್ತು ಜವಳಿ ಇಲಾಖೆ)
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 17, 2026 (ಕೈಮಗ್ಗ ಮತ್ತು ಜವಳಿ ಇಲಾಖೆ)
KEA Recruitment 2026 : Important Links
| NOTIFICATION (INDUSTRIAL EXPANSION OFFICER) | CLICK HERE |
| NOTIFICATION (SERICULTURE INSPECTOR & MARKETING SUPERVISOR) | CLICK HERE |
| NOTIFICATION (TEXTILE INSPECTOR – RPC) | CLICK HERE |
| NOTIFICATION (TEXTILE INSPECTOR – KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.