ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2024 – KEA Recruitment Notification 2024

KEA Recruitment Notification 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಂಸ್ಥೆಯ ಹೆಸರು, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Recruitment Notification 2024 : Details of Vacancies

ಸಂಸ್ಥೆಯ ಹೆಸರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಹುದ್ದೆ : ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು

ಸಂಸ್ಥೆಯ ಹೆಸರು : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ

ಹುದ್ದೆ : ವಿವಿಧ ವೃಂದದ ಹುದ್ದೆಗಳು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 101 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಇಲಾಖೆಹುದ್ದೆಗಳ ಸಂಖ್ಯೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 25
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ76

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ವಿವರವಾದ ಅಧಿಸೂಚನೆ ಪ್ರಕಟವಾಗುವ ದಿನಾಂಕ : ಮಾರ್ಚ್ 24, 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 24, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 23, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2024

KEA Recruitment 2024 : Important Links

SHORT NOTIFICATION – BDACLICK HERE
SHORT NOTIFICATION – GTTCCLICK HERE
APPLY ONLINE CLICK HERE ಮಾರ್ಚ್ 24 ರಿಂದ
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಈ ಮೇಲ್ಕಂಡ ವಿವಿಧ ಇಲಾಖೆಗಳ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ ವಿವರ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿಯ ವಿವರ ಹಾಗೂ ಪ್ರವರ್ಗವಾರು ಹುದ್ದೆಗಳ ವಿವರಗಳು ಹಾಗೂ ಇನ್ನಿತರ ಮಾಹಿತಿಗಳನ್ನು ಶೀಘ್ರದಲ್ಲೇ ವಿವರವಾದ ಅಧಿಸೂಚನೆಯಲ್ಲಿ ಪ್ರಕಟಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment