
KEA Residential School Teacher Recruitment 2026 : ಸಮಾಜ ಕಲ್ಯಾಣ ಇಲಾಖೆಯಲ್ಲಿನ ವಿವಿಧ ವೃಂದದಲ್ಲಿ ಖಾಲಿ ಇರುವ ವಸತಿ ಶಾಲಾ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Residential School Teacher Recruitment 2026 : Details of Vacancies
ಹುದ್ದೆ :
ವಸತಿ ಶಾಲಾ ಶಿಕ್ಷಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 140 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 100 |
| ಕಲ್ಯಾಣ ಕರ್ನಾಟಕ ವೃಂದ | 40 |
ಶೈಕ್ಷಣಿಕ ಅರ್ಹತೆ :
- ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 2 ವರ್ಷಗಳ ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಶನ್ (D.El.Ed) ಪಡೆದಿರಬೇಕು. ಅಥವಾ
- ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 4 ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ (B.El.Ed) ಪದವಿ ಪಡೆದಿರಬೇಕು. ಅಥವಾ
- ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 2 ವರ್ಷಗಳ ಡಿಪ್ಲೊಮಾ ಇನ್ ಎಜುಕೇಷನ್ (ಸ್ಪೇಷಲ್ ಎಜುಕೇಷನ್) ಪಡೆದಿರಬೇಕು. (ಪ.ಜಾತಿ, ಪ.ಪಂಗಡ, ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳು ಕನಿಷ್ಠ 45% ಅಂಕಗಳೊಂದಿಗೆ ಪಿಯುಸಿ ಅರ್ಹತೆ ಹೊಂದಿರಬೇಕು) ಮತ್ತು
- ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (18/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 41,300 ರಿಂದ ರೂ. 81,800 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್ಲೈನ್ (ಸಿಬಿಟಿ) ಅಥವಾ ಆಫ್ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು)
ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
- ವಿಶೇಷಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 21, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 18, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 19, 2026
KEA Residential School Teacher Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.