
KFD Beat Forester Recruitment 2026 : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.
KFD Beat Forester Recruitment 2026 : Details of Vacancies
ಹುದ್ದೆ :
ಗಸ್ತು ಅರಣ್ಯ ಪಾಲಕ (Beat Forester)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 450 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 355 |
| ಕಲ್ಯಾಣ ಕರ್ನಾಟಕ ವೃಂದ | 95 |
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿಯುಸಿ ವಿದ್ಯಾರ್ಹತೆ ಅಥವಾ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ವಾಹನ ಚಾಲಕ, ಆದೇಶ ಜಾರಿಕಾರ, ಜವಾನ ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 22/12/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 32 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
- ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 37 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಪಿಯುಸಿ ವಿದ್ಯಾರ್ಹತೆ ಅಥವಾ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಶಾರೀರಿಕ ಮಾನದಂಡಗಳ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಆಫ್‌ಲೈನ್ ಓಎಂಆರ್ ಮಾದರಿಯಲ್ಲಿ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಶಾರೀರಿಕ ಮಾನದಂಡಗಳ ಪರೀಕ್ಷೆ (PST) –

ದೈಹಿಕ ತಾಳ್ವಿಕೆ ಪರೀಕ್ಷೆ (PET) –

ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ (PET) –

ಲಿಖಿತ ಪರೀಕ್ಷೆ ಮಾದರಿ –

ಉದ್ಯೋಗ ಮಾಹಿತಿ : ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ – ರೂ. 750
- ಪ.ಜಾತಿ, ಪ.ಪಂ, ಪ್ರವರ್ಗ-1, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ – ರೂ. 500
- ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 250
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಯುಪಿಐ, NEFT, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 23, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 22, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 23, 2026
KFD Beat Forester Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.