KFD Forest Guard Recruitment 2023 : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ಅರಣ್ಯ ರಕ್ಷಕ) ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KFD Forest Guard Recruitment 2023 : Details of Vacancies
ಹುದ್ದೆ : ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 540 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೃತ್ತ | ಹುದ್ದೆಗಳ ಸಂಖ್ಯೆ |
ಬೆಂಗಳೂರು | 46 |
ಬೆಳಗಾವಿ | 10 |
ಬಳ್ಳಾರಿ | 28 |
ಚಾಮರಾಜನಗರ | 77 |
ಚಿಕ್ಕಮಗಳೂರು | 50 |
ಧಾರವಾಡ | 5 |
ಹಾಸನ | 17 |
ಕೆನರಾ | 51 |
ಕೊಡಗು | 33 |
ಕಲಬುರ್ಗಿ | 26 |
ಮಂಗಳೂರು | 57 |
ಮೈಸೂರು | 45 |
ಶಿವಮೊಗ್ಗ | 61 |
ಹಿಂಬಾಕಿ ಹುದ್ದೆ | 34 |
ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ. ವಿದ್ಯಾರ್ಹತೆ ಅಥವಾ ಪಿ.ಯು.ಸಿ. ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿ – ಗರಿಷ್ಠ 27 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 30 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 32 ವರ್ಷ
ಉದ್ಯೋಗ ಮಾಹಿತಿ : ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ
ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಶಾರೀರಿಕ ಮಾನದಂಡಗಳ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ವಸ್ತುನಿಷ್ಠ ಮಾದರಿ ಅಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ
• ಪುರುಷ ಅಭ್ಯರ್ಥಿಗಳು – ರೂ. 220
• ಮಹಿಳಾ/ ತೃತೀಯ ಲಿಂಗ ಅಭ್ಯರ್ಥಿಗಳು – ರೂ. 120
ಪ.ಜಾತಿ, ಪ.ಪಂ, ಪ್ರವರ್ಗ 1
• ಪುರುಷ ಅಭ್ಯರ್ಥಿಗಳು – ರೂ. 120
• ಮಹಿಳಾ/ ತೃತೀಯ ಲಿಂಗ ಅಭ್ಯರ್ಥಿಗಳು – ರೂ. 70
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 30, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 05, 2024
KFD Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.