ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕವಾಡಿಗ ಹುದ್ದೆಗಳ ನೇಮಕಾತಿ 2026 – KFD Recruitment 2026

KFD Recruitment 2026

KFD Recruitment 2026 : ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತದಲ್ಲಿ ಖಾಲಿ ಇರುವ ಆನೆ ಕವಾಡಿಗ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.

KFD Recruitment 2026 : Details of Vacancies

ಹುದ್ದೆ :

ಆನೆ ಕವಾಡಿಗ (ಗ್ರೂಪ್-ಡಿ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 57 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃತ್ತಹುದ್ದೆಗಳ ಸಂಖ್ಯೆ
ಮೈಸೂರು ವೃತ್ತ 27
ಕೊಡಗು ವೃತ್ತ 11
ಕೆನರಾ ವೃತ್ತ 1
ಶಿವಮೊಗ್ಗ ವೃತ್ತ 9
ಚಾಮರಾಜನಗರ ವೃತ್ತ9

ವಿದ್ಯಾರ್ಹತೆ :

ಅನುಭವ –

ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಅಧಿಸೂಚನೆ ಪ್ರಾರಂಭಿಕ ದಿನಾಂಕಕ್ಕೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯೊಳಗಿರತಕ್ಕದ್ದು. ಹಾಗೂ ಸರ್ಕಾರದ ಆದೇಶದನ್ವಯ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿರುತ್ತದೆ.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,600 ರಿಂದ ರೂ. 52,800 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳು ಸಂದರ್ಶನ ಪರೀಕ್ಷೆ ಮತ್ತು ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಬಗ್ಗೆ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕಂದಾಯ ಇಲಾಖೆಯಿಂದ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಮುದ್ದಾಂ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

  • ಮೈಸೂರು ವೃತ್ತ – ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಮೈಸೂರು ವೃತ್ತ, ಮೈಸೂರು, ಅರಣ್ಯ ಭವನ, ಅಶೋಕಪುರಂ, ಮೈಸೂರು – 570008
  • ಕೊಡಗು ವೃತ್ತ – ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಕೊಡಗು ವೃತ್ತ, ಮಡಿಕೇರಿ, ಅರಣ್ಯ ಭವನ
  • ಕೆನರಾ ವೃತ್ತ – ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕೆನರಾ ವೃತ್ತ, ಶಿರಸಿ – 581402
  • ಶಿವಮೊಗ್ಗ ವೃತ್ತ – ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಶಿವಮೊಗ್ಗ ವೃತ್ತ, ಶಿವಮೊಗ್ಗ
  • ಚಾಮರಾಜನಗರ ವೃತ್ತ – ವೃತ್ತ ಕಛೇರಿ, ಚಾಮರಾಜನಗರ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 05, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2026

KFD Elephant Kavadiga Recruitment 2026 : Important Links

MYSORE CIRCLE – NOTIFICATION & APPLICATION FORMCLICK HERE
KODAGU CIRCLE – NOTIFICATION & APPLICATION FORMCLICK HERE
CANARA CIRCLE – NOTIFICATION & APPLICATION FORMCLICK HERE
SHIVAMOGGA CIRCLE – NOTIFICATION & APPLICATION FORMCLICK HERE
CHAMARAJANAGARA CIRCLE – NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment