ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ 2024 – KKRTC Raichur Apprentice Recruitment 2024

KKRTC Raichur Apprentice Recruitment 2024 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KKRTC Raichur Apprentice Recruitment 2024 : Details of Vacancies

ಹುದ್ದೆ : ಅಪ್ರೆಂಟಿಸ್ (ಆಟೋ ಮೆಕಾನಿಕ್, ಆಟೋ ವಿದ್ಯುತ್, ಆಟೋ ವೆಲ್ಡರ್, ಆಟೋ ಬಾಡಿ ಫಿಟ್ಟರ್, ಆಟೋ ಪೇಂಟರ್, ಆಟೋ ಮಷಿನಿಸ್ಟ್)

ತರಬೇತಿ ಸ್ಥಳ : ಶಿಶಿಕ್ಷು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ರಾಯಚೂರು ವಿಭಾಗದ ರಾಯಚೂರು ಘಟಕ-2, ರಾಯಚೂರು ಘಟಕ-3/ ಲಿಂಗಸೂರು ಘಟಕ/ ಸಿಂಧನೂರು ಘಟಕ/ ಮಾನವಿ ಘಟಕ/ ದೇವದುರ್ಗ ಘಟಕ/ ಮಸ್ಕಿ ಘಟಕ/ ವಿಭಾಗೀಯ ಕಾರ್ಯಾಗಾರಗಳಿಗೆ ನಿಯೋಜಿಸಿದ ಯಾವುದೇ ಸ್ಥಳದಲ್ಲಿ ತರಬೇತಿ ಪಡೆಯಲು ಸಿದ್ಧರಿರಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 133 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೃತ್ತಿಯ ಹೆಸರುಹುದ್ದೆಗಳ ಸಂಖ್ಯೆ
ಆಟೋ ಮೆಕಾನಿಕ್46
ಆಟೋ ವಿದ್ಯುತ್28
ಆಟೋ ವೆಲ್ಡರ್20
ಆಟೋ ಬಾಡಿ ಫಿಟ್ಟರ್20
ಆಟೋ ಪೇಂಟರ್10
ಆಟೋ ಮಷಿನಿಸ್ಟ್9

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಟೋ ಮೆಕಾನಿಕ್, ಆಟೋ ವಿದ್ಯುತ್, ಆಟೋ ವೆಲ್ಡರ್, ಆಟೋ ಬಾಡಿ ಫಿಟ್ಟರ್, ಆಟೋ ಪೇಂಟರ್, ಆಟೋ ಮಷಿನಿಸ್ಟ್ ಸಂಬಂಧಿಸಿದ ವೃತ್ತಿಗಳಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನೇಮಕಾತಿ 2024

ವಯಸ್ಸಿನ ಮೀತಿ : ದಿನಾಂಕ 31/12/2023ಕ್ಕೆ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 40 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ, ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಸಂದರ್ಶನ ನಡೆಯುವ ಸ್ಥಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಛೇರಿ, ರಾಯಚೂರು ವಿಭಾಗ, ರಾಯಚೂರು

ನೇರ ಸಂದರ್ಶನ ದಿನಾಂಕದ ವಿವರ :
ಅಭ್ಯರ್ಥಿಗಳು ಮೌಖಿಕ ಸಂದರ್ಶನಕ್ಕೆ ಹಾಜರಾಗುವ ದಿನಾಂಕ : ಜನವರಿ 11, 2024 ಬೆಳಿಗ್ಗೆ 10.00 ಘಂಟೆಗೆ

KKRTC Raichur Apprentice Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡಿರುವ ಅರ್ಜಿಯ ಜೊತೆ ಜನ್ಮ ದಿನಾಂಕ. ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳು ಜಾತಿ / ಆದಾಯ ಪ್ರಮಾಣ ಪತ್ರಗಳ ನಕಲು ಪತ್ರಿಗಳನ್ನು ಹಾಗೂ ಇತ್ತೀಚಿನ 02 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ನೇರ ಸಂದರ್ಶನಕ್ಕೆ (Walk in interview) ಹಾಜರಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment